alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರ ಸಾಲ ಮನ್ನಾಕ್ಕಾಗಿ ಶಾಸಕರ ನಿಧಿ ಮೇಲೆ ಕಣ್ಣಿಟ್ಟ ಸಮ್ಮಿಶ್ರ ಸರ್ಕಾರ

ಜುಲೈ 5 ರಂದು ಮಂಡನೆಯಾಗಲಿರುವ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುವ ಒತ್ತಡದಲ್ಲಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇದಕ್ಕಾಗಿ ಸಂಪನ್ಮೂಲ ಕ್ರೋಢೀಕರಣಕ್ಕೆ ಮುಂದಾಗಿದ್ದಾರೆ.

ಇದಕ್ಕಾಗಿ ಈಗ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ತಲಾ ಮೂರು ಕೋಟಿ ರೂ. ನಂತೆ 2002 ರಿಂದ 2014 ರವರೆಗೆ ನೀಡಿದ ಸಾವಿರ ಕೋಟಿಗೂ ಅಧಿಕ ಹಣ ಬಳಕೆಯಾಗದೆ ಉಳಿದಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅದನ್ನು ಈಗ ವಾಪಸ್ ತರಿಸಿಕೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಈ ಹಣ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಉಳಿದಿದೆ ಎನ್ನಲಾಗಿದ್ದು, ಅದನ್ನು ವಾಪಸ್ ತರಿಸಿಕೊಂಡು ಕೊಂಚ ಮಟ್ಟಿಗೆ ಆರ್ಥಿಕ ಹೊರೆಯನ್ನು ತಗ್ಗಿಸಿಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ. ಸಿದ್ದರಾಮಯ್ಯ ಸರ್ಕಾರದ ಕೊನೆಯ ಬಜೆಟ್ ನಲ್ಲಿ ನೀಡಿದ್ದ ಹಣವೂ ವಾಪಾಸ್ ಆಗಲಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...