alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಸ ಸರ್ಕಾರದ ಚೊಚ್ಚಲ ಬಜೆಟ್ ನಲ್ಲೇ ರಾಜ್ಯದ ರೈತರಿಗೆ ಸಿಗಲಿದೆ ಭರ್ಜರಿ ಗಿಫ್ಟ್

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಜುಲೈ 5 ರಂದು ತಮ್ಮ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ.

ಹೊಸ ಸರ್ಕಾರದ ಬಜೆಟ್ ಕುರಿತು ಸಾರ್ವಜನಿಕರಲ್ಲಿ ಭಾರಿ ಕುತೂಹಲ ಮೂಡಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಜೆಡಿಎಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಹಲವು ಯೋಜನೆಗಳನ್ನು ಕಾರ್ಯಗತಗೊಳಿಸುವ ಜವಾಬ್ದಾರಿ ಕುಮಾರಸ್ವಾಮಿಯವರದ್ದಾಗಿದೆ.

ಅದರಲ್ಲೂ ಪ್ರಮುಖವಾಗಿ ರೈತರ ಸಾಲ ಮನ್ನಾ ಮಾಡುವ ಪ್ರಮುಖ ಹೊಣೆಗಾರಿಕೆ ಕುಮಾರಸ್ವಾಮಿಯವರ ಮೇಲಿದ್ದು, ತಮ್ಮ ಮಾತಿಗೆ ಬದ್ಧವಾಗಿರುವ ಮುಖ್ಯಮಂತ್ರಿಗಳು ಇದಕ್ಕೆ ಪೂರಕ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸರ್ಕಾರದ ಚೊಚ್ಚಲ ಬಜೆಟ್ ನಲ್ಲಿಯೇ ರಾಜ್ಯದ ರೈತರಿಗೆ ಬಂಪರ್ ಗಿಫ್ಟ್ ಸಿಗಲಿದೆ ಎನ್ನಲಾಗಿದ್ದು, ಒಟ್ಟು ಎರಡು ಹಂತದಲ್ಲಿ ರೈತರ ಸಾಲ ಮನ್ನಾ ಮಾಡಲು ನಿರ್ಧರಿಸಿರುವ ಮುಖ್ಯಮಂತ್ರಿಗಳು ಮೊದಲ ಹಂತದಲ್ಲಿ 33 ರಿಂದ 34 ಸಾವಿರ ಕೋಟಿ ರೂ.ಗಳನ್ನು ಇದಕ್ಕಾಗಿ ಮೀಸಲಿಡಲಿದ್ದಾರೆಂದು ತಿಳಿದು ಬಂದಿದೆ.

ಎರಡನೇ ಹಂತದಲ್ಲಿ ಉಳಿದ ಹಣವನ್ನು ಸಾಲ ಮನ್ನಾಕ್ಕಾಗಿ ನೀಡಲಾಗುತ್ತಿದ್ದು, ಇದಕ್ಕೂ ಸಿದ್ಧತೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...