alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್.ಡಿ.ಕೆ-ಸಿದ್ದರಾಮಯ್ಯ ಮುಸುಕಿನ ಗುದ್ದಾಟ ಬಹಿರಂಗವಾದ ಬಳಿಕ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ

 

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದ ತಿಂಗಳೊಪ್ಪತ್ತಿನಲ್ಲಿಯೇ ಸಂಕಷ್ಟಕ್ಕೆ ಸಿಲುಕಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾದ ಬಳಿಕ ಬಿಜೆಪಿಯಲ್ಲಿ ಭಾರೀ ಚಟುವಟಿಕೆ ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಗುಜರಾತಿನ ಅಹಮದಾಬಾದ್ ಗೆ ತೆರಳಿ ಭೇಟಿಯಾದ ಬಳಿಕ ಬೆಂಗಳೂರಿಗೆ ಹಿಂದಿರುಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಆಪ್ತ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದು, ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರನ್ನು ಸೆಳೆಯುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮೈತ್ರಿಕೂಟ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದರೂ ಎರಡೂ ಪಕ್ಷಗಳ ಶಾಸಕರು ಪರಸ್ಪರ ವಿರೋಧಾಭಾಸ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕಡೆ ಪಕ್ಷ ಅಂತಹ ಮೂರ್ನಾಲ್ಕು ಶಾಸಕರನ್ನಾದರೂ ಸೆಳೆಯುವ ಮೂಲಕ ಸರ್ಕಾರಕ್ಕೆ ಶಾಕ್ ನೀಡಲು ಯಡಿಯೂರಪ್ಪ ತಮ್ಮ ಬೆಂಬಲಿಗ ಶಾಸಕರಿಗೆ ಸೂಚಿಸಿದ್ದಾರೆನ್ನಲಾಗಿದೆ.

ಮೈತ್ರಿಕೂಟ ಸರ್ಕಾರದ ಹೊಸ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಸಜ್ಜಾಗುತ್ತಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಇಂತಹ ಬೆಳವಣಿಗೆಗಳು ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...