alex Certify
ಕನ್ನಡ ದುನಿಯಾ       Mobile App
       

Kannada Duniya

ಜಂಟಿ ಶಾಸಕಾಂಗ ಸಭೆಯಲ್ಲಿ ಡಿಸಿಎಂ ಹುದ್ದೆ ಬಗ್ಗೆ ಚರ್ಚೆ

ಜೆಡಿಎಸ್-ಕಾಂಗ್ರೆಸ್ ಸೇರಿ ಮೈತ್ರಿ ಸರ್ಕಾರ ರಚನೆಗೆ ಮುಂದಾಗಿದೆ. ಬುಧವಾರ ಸಿಎಂ ಆಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಕುಮಾರಸ್ವಾಮಿ ಜೊತೆ ಯಾವ್ಯಾವ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ. ಈ ಬಗ್ಗೆ ಕಾಂಗ್ರೆಸ್-ಜೆಡಿಎಸ್ ನಾಯಕರು ಚಿಂತನೆ ನಡೆಸುತ್ತಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ನಾಯಕರು ಇಂದು ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕುಮಾರಸ್ವಾಮಿ ಕ್ಯಾಬಿನೆಟ್ ನಲ್ಲಿ ಯಾರ್ಯಾರಿರಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳುವ ಸಾಧ್ಯತೆಯಿದೆ. ಎರಡೂ ಪಕ್ಷಗಳ ಜಂಟಿ ಶಾಸಕಾಂಗ ಸಭೆಯಲ್ಲಿ ಸಚಿವ ಸ್ಥಾನದ ಬಗ್ಗೆ ಚರ್ಚೆ ನಡೆಯಲಿದೆ. ಉಪ ಮುಖ್ಯಮಂತ್ರಿ, ಸ್ಪೀಕರ್ ಹುದ್ದೆ ಬಗ್ಗೆಯೂ ನಾಯಕರು ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.

ಕುಮಾರಸ್ವಾಮಿ ಜೊತೆ ಯಾವ ಶಾಸಕರು ಪ್ರಮಾಣ ವಚನ ಸ್ವೀಕರಿಸಬೇಕು ಎಂಬ ಬಗ್ಗೆಯೂ ಮಾತುಕತೆ ನಡೆಯಲಿದೆ. ಉಪಮುಖ್ಯಮಂತ್ರಿ ವಿಚಾರ ಸದ್ಯ ಚರ್ಚೆಯ ವಿಷ್ಯವಾಗಿದೆ. ಜೆಡಿಎಸ್ ಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ರೆ ಕಾಂಗ್ರೆಸ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬುದು ನಿರ್ಣಯವಾಗಿದೆ. ಜಿ. ಪರಮೇಶ್ವರ್ ಡಿಸಿಎಂ ರೇಸ್ ನಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆದ್ರೆ ಲಿಂಗಾಯಿತರಿಗೆ ಡಿಸಿಎಂ ಹುದ್ದೆ ನೀಡಬೇಕೆಂಬ ಬೇಡಿಕೆ ಕೇಳಿ ಬರ್ತಿದೆ. ಹಾಗಾಗಿ ಯಾರಿಗೆ ಡಿಸಿಎಂ ನೀಡಬೇಕೆಂಬುದು ಇಂದು ನಿರ್ಣಯವಾಗುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ ನಾಳೆ ಕುಮಾರಸ್ವಾಮಿ ಜೊತೆ ಕೆಲವೇ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ವಿಶ್ವಾಸಮತಯಾಚನೆ ನಂತ್ರ ಉಳಿದವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕುಮಾರಸ್ವಾಮಿ ಸಚಿವ ಸಂಪುಟದಲ್ಲಿ 34 ಮಂತ್ರಿಗಳಿರಲಿದ್ದಾರೆ ಎನ್ನಲಾಗ್ತಿದೆ. ಅದ್ರಲ್ಲಿ 20 ಕಾಂಗ್ರೆಸ್ ಮಂತ್ರಿಗಳಾದ್ರೆ 14 ಜೆಡಿಎಸ್ ಮಂತ್ರಿಗಳಿರಲಿದ್ದಾರೆ. ಬಿಎಸ್ಪಿ ಹಾಗೂ ಸ್ವತಂತ್ರ ಅಭ್ಯರ್ಥಿ ಜೆಡಿಎಸ್ ಕೋಟಾದಲ್ಲಿರಲಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...