alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಶಾಸಕರನ್ನು ಸೆಳೆಯಲು ಯಶಸ್ವಿಯಾಗ್ತಾರಾ ಹೆಚ್.ಡಿ.ಕೆ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಜೆಡಿಎಸ್ ಹಾಗೂ ಕಾಂಗ್ರೆಸ್ ಒಗ್ಗೂಡಿ ಸಮ್ಮಿಶ್ರ ಸರ್ಕಾರವನ್ನು ರಚಿಸಿದ್ದು, ಅತ್ಯಧಿಕ ಶಾಸಕರನ್ನು ಹೊಂದಿದ್ದರೂ ಬಿಜೆಪಿ ಅಧಿಕಾರದಿಂದ ವಂಚಿತವಾಗಬೇಕಾಯಿತು.

ಸರ್ಕಾರ ಅಧಿಕಾರ ಸ್ವೀಕರಿಸಿದ ಬಳಿಕ ಹಲವು ಸವಾಲುಗಳನ್ನು ಎದುರಿಸಿದ್ದು, ಈ ಎಲ್ಲಾ ಅಡೆತಡೆಗಳನ್ನು ನಿವಾರಿಸಿಕೊಂಡು 100 ದಿನ ಪೂರೈಸಿದ ಬೆನ್ನಲ್ಲೇ ಈಗ ಮತ್ತೊಂದು ಸಮಸ್ಯೆ ಸೃಷ್ಟಿಯಾಗಿದೆ.

ಬೆಳಗಾವಿ ರಾಜಕಾರಣದಲ್ಲಿ ಸ್ವಪಕ್ಷೀಯ ನಾಯಕರ ಹಸ್ತಕ್ಷೇಪದಿಂದಾಗಿ ಕೆಂಡಾಮಂಡಲಗೊಂಡಿರುವ ಜಾರಕಿಹೊಳಿ ಸಹೋದರರು ಪಕ್ಷದ ವಿರುದ್ಧವೇ ಸೆಡ್ಡು ಹೊಡೆದಿದ್ದು, ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ತಮ್ಮ ಮಾರ್ಗ ತಾವು ನೋಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದು ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಸಂಕಷ್ಟಕ್ಕೀಡು ಮಾಡಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಕೆಲವೇ ದಿನಗಳಲ್ಲಿ ಬಿಜೆಪಿಯ ಐದು ಮಂದಿ ಶಾಸಕರು ರಾಜೀನಾಮೆ ನೀಡುತ್ತಾರೆಂಬ ಹೊಸ ಬಾಂಬ್ ಸಿಡಿಸಿದ್ದಾರೆ.

ಆದರೆ ಬಿಜೆಪಿ ಶಾಸಕರನ್ನು ಸೆಳೆಯುವ ಯಾವುದೇ ತಂತ್ರಗಾರಿಕೆ ಆಡಳಿತ ಪಕ್ಷದಲ್ಲಿ ನಡೆಯುತ್ತಿಲ್ಲವೆನ್ನಲಾಗಿದ್ದು, ಕುಮಾರಸ್ವಾಮಿಯವರು ಕೇವಲ ತೋರಿಕೆಗಾಗಿ ಮಾತುಗಳನ್ನಾಡಿದ್ದಾರೆಂದು ಹೇಳಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...