alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ್ರಾ ಕುಮಾರಸ್ವಾಮಿ?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ಅನಿವಾರ್ಯವಾಗಿ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರೈತರ ಸಾಲ ಮನ್ನಾ ಮಾಡುವುದಾಗಿ ತಿಳಿಸಿದ್ದರು.

ಆದರೆ ಇದಕ್ಕೆ ಕೆಲ ಕಾಂಗ್ರೆಸ್ ನಾಯಕರು ಅಡ್ಡಗಾಲು ಹಾಕಿದಾಗ ಕುಮಾರಸ್ವಾಮಿ ಸಿಡಿಮಿಡಿಗೊಂಡಿದ್ದರಲ್ಲದೆ, ಒಂದು ವೇಳೆ ರೈತರ ಸಾಲ ಮನ್ನಾ ಮಾಡುವುದು ಸಾಧ್ಯವಾಗದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

ಕಾಂಗ್ರೆಸ್ ಹೈಕಮಾಂಡ್ ಮಧ್ಯ ಪ್ರವೇಶದ ಬಳಿಕ ಈ ಸಮಸ್ಯೆ ಬಗೆಹರಿದಿದ್ದು, ಕುಮಾರಸ್ವಾಮಿಯವರು ತಾವು ಹೇಳಿದಂತೆ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಘೋಷಣೆ ಮಾಡಿದ್ದಾರೆ. ಇದಾದ ಬಳಿಕವೂ ಕಾಂಗ್ರೆಸ್ ನಾಯಕರು ಆಡಳಿತದ ವಿಚಾರದಲ್ಲಿ ಒತ್ತಡ ತರುತ್ತಿರುವುದನ್ನು ಕುಮಾರಸ್ವಾಮಿಯವರು ಜೆಡಿಎಸ್ ಕಾರ್ಯಕ್ರಮದಲ್ಲಿ ಪರೋಕ್ಷವಾಗಿ ವ್ಯಕ್ತಪಡಿಸಿದ್ದರು.

ಇದೀಗ ತಮ್ಮ ಆಪ್ತರ ಬಳಿ ಮತ್ತೊಮ್ಮೆ ನೋವು ತೋಡಿಕೊಂಡಿರುವ ಕುಮಾರಸ್ವಾಮಿಯವರು, ಮುಖ್ಯಮಂತ್ರಿ ಹುದ್ದೆ ತಮಗೆ ಸಾಕಾಗಿ ಹೋಗಿದೆ ಎಂದು ಹೇಳಿಕೊಂಡಿದ್ದಾರೆನ್ನಲಾಗಿದೆ. ಜೆಡಿಎಸ್ ಬಲವರ್ಧನೆಗಾಗಿ ತಾವು ಈ ಸ್ಥಾನದಲ್ಲಿ ಮುಂದುವರೆದಿದ್ದು, ಇಲ್ಲದಿದ್ದರೆ ಇಷ್ಟರಲ್ಲೇ ಸ್ಥಾನ ತೊರೆಯುತ್ತಿದ್ದೆ ಎಂದು ಹೇಳಿದ್ದಾರೆನ್ನಲಾಗಿದೆ. ಕಾಂಗ್ರೆಸ್ ನಾಯಕರ ಒತ್ತಡ ಇದೇ ರೀತಿ ಮುಂದುವರಿದರೆ ಸ್ಥಾನ ನಿಭಾಯಿಸುವುದು ಕಷ್ಟ ಎಂದು ಕುಮಾರಸ್ವಾಮಿಯವರು ತಿಳಿಸಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...