alex Certify
ಕನ್ನಡ ದುನಿಯಾ       Mobile App
       

Kannada Duniya

ಸೋಮವಾರ ಕಂಠೀರವ ಕ್ರೀಡಾಂಗಣದಲ್ಲಿ ಹೆಚ್.ಡಿ.ಕೆ. ಪ್ರಮಾಣವಚನ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸೋಮವಾರದಂದು ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜಭವನದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾರನ್ನು ಭೇಟಿ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ ಹೆಚ್.ಡಿ. ಕುಮಾರಸ್ವಾಮಿಯವರು, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಯಾವತಿ, ಅಖಿಲೇಶ್ ಸಿಂಗ್ ಯಾದವ್ ಸೇರಿದಂತೆ ಹಲವರನ್ನು ಆಹ್ವಾನಿಸುವುದಾಗಿ ಹೇಳಿದ್ದಾರೆ.

ಮೂರು ದಿನಗಳ ಹಿಂದೆ ಅಸ್ತಿತ್ವಕ್ಕೆ ಬಂದಿದ್ದ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಾಗದ ಹಿನ್ನಲೆಯಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ, ಸರ್ಕಾರ ರಚಿಸುವಂತೆ ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಿದ್ದರು. ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸೋಮವಾರದಂದು ಪ್ರಮಾಣವಚನ ಸ್ವೀಕರಿಸುವುದಾಗಿ ಕುಮಾರಸ್ವಾಮಿಯವರು ಹೇಳಿದ್ದು, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...