alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್.ಡಿ.ಕೆ. ಪ್ರಮಾಣವಚನವನ್ನು ಸಂಜೆ ಸ್ವೀಕರಿಸುತ್ತಿರುವ ಹಿನ್ನಲೆಯೇನು ಗೊತ್ತಾ?

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ ಮತ್ತವರ ಕುಟುಂಬಸ್ಥರಿಗೆ ಜ್ಯೋತಿಷ್ಯದ ಮೇಲೆ ಎಲ್ಲಿಲ್ಲದ ನಂಬಿಕೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಈ ಹಿಂದೆ, ಜೆಡಿಎಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಕಾರಣಕ್ಕೆ ದೇವೇಗೌಡರು ಹಲವು ಪೂಜೆ ಪುನಸ್ಕಾರಗಳನ್ನು ಕೈಗೊಂಡಿದ್ದರು.

ಈಗ ಆ ಕಾಲ ಸನ್ನಿಹಿತವಾಗಿದ್ದು, ದೇವೇಗೌಡರ ಪುತ್ರ ಹೆಚ್.ಡಿ. ಕುಮಾರಸ್ವಾಮಿ, ನಾಳೆ ಸಂಜೆ 4-30 ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ದೇವೇಗೌಡ ಮತ್ತವರ ಕುಟುಂಬಸ್ಥರು ಕಳೆದೆರೆಡು ದಿನಗಳಿಂದಲೂ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ.

ಈ ಮಧ್ಯೆ ಕುಮಾರಸ್ವಾಮಿಯವರು ಪ್ರಮಾಣವಚನ ತೆಗೆದುಕೊಳ್ಳುವ ಸಮಯದ ಬಗ್ಗೆ ಬಹುತೇಕರಿಗೆ ಕುತೂಹಲವಿದೆ. ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ಸಂಜೆ ನಾಲ್ಕು ಗಂಟೆ ನಂತರ ಪ್ರಮಾಣವಚನ ಸ್ವೀಕರಿಸುತ್ತಿರುವುದಕ್ಕೂ ಒಂದು ಕಾರಣವಿದೆ ಎನ್ನಲಾಗಿದೆ. ಈ ಸಮಯ ಅಮೃತ ಸಿದ್ದಿ ಯೋಗದ ಸಮಯವಂತೆ. ಈ ಸಮಯದಲ್ಲಿ ಪ್ರಮಾಣವಚನ ತೆಗೆದುಕೊಂಡರೆ ಸರ್ಕಾರ ಸ್ಥಿರವಾಗಿರುತ್ತದೆ ಎಂದು ಜ್ಯೋತಿಷಿಗಳು ಹೇಳಿರುವ ಹಿನ್ನಲೆಯಲ್ಲಿ ಪ್ರಮಾಣವಚನ ಸ್ವೀಕಾರಕ್ಕೆ ಕುಮಾರಸ್ವಾಮಿಯವರು ಈ ಸಮಯವನ್ನು ನಿಗದಿಪಡಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...