alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿಯಾಗಿದ್ದರ ಹಿಂದಿನ ‘ರಹಸ್ಯ’ ಬಿಚ್ಚಿಟ್ಟ ಕುಮಾರಸ್ವಾಮಿ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ.

ಜೆಡಿಎಸ್ ಕೇರಳ ಘಟಕ ಶನಿವಾರದಂದು ತಮ್ಮನ್ನು ಅಭಿನಂದಿಸಿ ಸನ್ಮಾನ ಮಾಡಿದ ವೇಳೆ ತಾವು ಮುಖ್ಯಮಂತ್ರಿಯಾಗಿರುವುದರ ಹಿಂದಿನ ರಹಸ್ಯವನ್ನು ಕುಮಾರಸ್ವಾಮಿಯವರು ಬಿಚ್ಚಿಟ್ಟಿದ್ದಾರೆ.

ಈ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ನಾನು ಅಯ್ಯಪ್ಪ ಸ್ವಾಮಿಯ ಪರಮ ಭಕ್ತನಾಗಿದ್ದು, ಆತನ ಆಶೀರ್ವಾದದಿಂದಲೇ ಮುಖ್ಯಮಂತ್ರಿ ಸ್ಥಾನ ಲಭಿಸಿದೆ ಎಂದು ಹೇಳಿದ್ದಾರೆ. 2005 ರಲ್ಲಿ ತಾವು ಶಬರಿಮಲೆಗೆ ಭೇಟಿ ನೀಡಿದ್ದು, ಅದರ ಮರುವರ್ಷವೇ ಮುಖ್ಯಮಂತ್ರಿ ಸ್ಥಾನ ಲಭಿಸಿತ್ತು ಎಂದು ಕುಮಾರಸ್ವಾಮಿ ಸ್ಮರಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...