alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂದಿನ ಸಿಎಂ ಕುಮಾರಸ್ವಾಮಿ ? ಸೋಮವಾರ ಪ್ರಮಾಣ ವಚನ ಸಾಧ್ಯತೆ

ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯುತ್ತಿದ್ದಂತೆ ಕಾಂಗ್ರೆಸ್-ಜೆಡಿಎಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಜೆಡಿಎಸ್-ಕಾಂಗ್ರೆಸ್ ಹೊಸ ಸರ್ಕಾರ ರಚನೆಗೆ ತಯಾರಿ ನಡೆಸಿದೆ. ವಿಧಾನಸಭೆ ಕಲಾಪದಲ್ಲಿಯೇ ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಕೈ ಎತ್ತಿ ಗೆಲುವಿನ ಖುಷಿ ಅನುಭವಿಸಿದ್ದಾರೆ.

ಈಗಾಗಲೇ ಕಾಂಗ್ರೆಸ್ ಜೆಡಿಎಸ್ ಗೆ ಬೇಷರತ್ ಬೆಂಬಲ ನೀಡಿದೆ. ಹಾಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸೋಮವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆಯೊಳಗೆ ರಾಜ್ಯಪಾಲರು ಸರ್ಕಾರ ರಚನೆಗೆ ಕುಮಾರಸ್ವಾಮಿಯವರನ್ನು ಆಹ್ವಾನಿಸಿದ್ರೆ ಸೋಮವಾರ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅವಕಾಶ ಕೋರಲಿದ್ದಾರೆ. ನಂತ್ರ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಲಿದ್ದು, ವಿಧಾನಸಭೆಯಲ್ಲಿ ಕುಮಾರಸ್ವಾಮಿ ಬಹುಮತ ಸಾಬೀತುಪಡಿಸಬೇಕಿದೆ. ನಮ್ಮೆಲ್ಲ ಕರ್ತವ್ಯವನ್ನು ನಾವು ಮಾಡ್ತೇವೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...