alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಡೂಟವನ್ನು ಅರ್ಧಕ್ಕೆ ಬಿಟ್ಟು ಓಡಿದ ಜೆಡಿಎಸ್ ಕಾರ್ಯಕರ್ತರು…! ಕಾರಣವೇನು ಗೊತ್ತಾ?

ಬೆಂಗಳೂರಿನ ಟಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಮಂಜುನಾಥ್, ಭಾನುವಾರವಾದ ಇಂದು ಪಕ್ಷದ ಕಾರ್ಯಕರ್ತರಿಗಾಗಿ ನೆಲಮಂಗಲ ಸಮೀಪದ ಮಾದವಾರದಲ್ಲಿನ ನೀಲಕಂಠ ಕನ್ವೆನ್ಷನ್ ಹಾಲ್ ನಲ್ಲಿ ಭರ್ಜರಿ ಬಾಡೂಟ ಏರ್ಪಡಿಸಿದ್ದರು.

ಈ ಬಾಡೂಟಕ್ಕೆ 40 ಸಾವಿರಕ್ಕೂ ಅಧಿಕ ಮಂದಿ ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಸಹ ಈ ಸಂದರ್ಭದಲ್ಲಿ ಭೇಟಿ ನೀಡಿದ್ದರು.

ದೇವೇಗೌಡರು ಆಗಮಿಸುತ್ತಿದ್ದಂತೆಯೇ ಬಹುತೇಕ ಮಂದಿ ಜೆಡಿಎಸ್ ಕಾರ್ಯಕರ್ತರು, ಅರ್ಧದಲ್ಲಿಯೇ ತಮ್ಮ ಊಟವನ್ನು ಬಿಟ್ಟು ಅವರನ್ನು ಭೇಟಿ ಮಾಡಲು ತೆರಳಿದ್ದಾರೆ. ಅಷ್ಟೇ ಅಲ್ಲ ಮುಂದಿನ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಜಯವಾಗಲಿ ಎಂಬ ಘೋಷಣೆಗಳನ್ನು ಕೂಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...