alex Certify
ಕನ್ನಡ ದುನಿಯಾ       Mobile App
       

Kannada Duniya

ಸಮ್ಮಿಶ್ರ ಸರ್ಕಾರಕ್ಕೆ ಎದುರಾಯ್ತು ಮೊದಲ ಸಂಕಷ್ಟ: ದೇವೇಗೌಡರ ಮನೆಗೆ ಸಿಎಂ ದೌಡು

ಕೆಲದಿನಗಳ ಹಿಂದಷ್ಟೇ ಅಸ್ತಿತ್ವಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರಕ್ಕೆ ಮೊದಲ ಸಂಕಷ್ಟ ಎದುರಾಗಿದೆ. ಸಚಿವ ಡಿ.ಕೆ. ಶಿವಕುಮಾರ್ ಅವರ ಹೆಸರು ಹವಾಲಾ ಸುಳಿಯಲ್ಲಿ ಸಿಲುಕಿರುವುದು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಂದಿಗ್ಧ ಪರಿಸ್ಥಿತಿಯನ್ನು ತಂದೊಡ್ಡಿದೆ.

ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸಭೆಯನ್ನು ಮೊಟಕುಗೊಳಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಲು ಪದ್ಮನಾಭನಗರ ನಿವಾಸಕ್ಕೆ ತೆರಳಿದ್ದಾರೆಂದು ಹೇಳಲಾಗಿದೆ. ಸಚಿವ ಹೆಚ್.ಡಿ. ರೇವಣ್ಣ ಸಹ ಜೊತೆಗೂಡಿದ್ದು, ಐಟಿ ಇಲಾಖೆ ನೋಟೀಸ್ ನಿಂದಾಗಿ ಮುಂದಿನ ದಿನಗಳಲ್ಲಿ ಸೆರ್ಕಾರದ ಮೇಲೆ ಯಾವ ಪರಿಣಾಮ ಬೀರಬಹುದೆನ್ನುವ ಕುರಿತು ಸಮಾಲೋಚನೆ ನಡೆಸಲಾಗಿದೆ ಎನ್ನಲಾಗಿದೆ.

ಈ ಮಧ್ಯೆ ಡಿ.ಕೆ. ಶಿವಕುಮಾರ್ ಅವರಿಗೆ ಸಮನ್ಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ಮುಖಂಡರು, ರಾಜೀನಾಮೆಗೆ ಆಗ್ರಹಿಸುತ್ತಿದ್ದು, ಇದಕ್ಕೆ ಕಿಡಿಕಾರಿರುವ ಡಿ.ಕೆ. ಶಿವಕುಮಾರ್, ತಮ್ಮ ಬಳಿಯೂ ಸಾಕಷ್ಟು ಡೈರಿಗಳಿವೆ. ಸಮಯ ಬಂದಾಗ ಬಹಿರಂಗಪಡಿಸಲಿದ್ದೇನೆ ಎಂದು ಹೇಳುವ ಮೂಲಕ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...