alex Certify
ಕನ್ನಡ ದುನಿಯಾ       Mobile App
       

Kannada Duniya

ವಿಕಲಚೇತನರಿಗೆ ಸಿಹಿ ಸುದ್ದಿ ನೀಡಿದ ಸಿಎಂ

ಹುಬ್ಬಳ್ಳಿ: ಜನತಾದರ್ಶನದ ಮೂಲಕ ಹಲವು ವಿಕಲಚೇತನರು ನನ್ನನ್ನು ಭೇಟಿ ಮಾಡಿ ಉದ್ಯೋಗ ಕಲ್ಪಿಸಲು ಮನವಿ ಮಾಡುತ್ತಿದ್ದಾರೆ. ಪದವಿ, ಸ್ನಾತಕೋತ್ತರ ಪದವಿಗಳನ್ನು ಪಡೆದಿರುವ ವಿಕಲಚೇತನರಿಗೆ ಆಯಾ ಜಿಲ್ಲೆಗಳಲ್ಲಿ ಇರುವ ಕೈಗಾರಿಕೆಗಳಲ್ಲಿ ಕೆಲಸ ಕೊಡಿಸಲು ಉದ್ದೇಶಿಸಲಾಗಿದೆ. ಜಿಲ್ಲಾಧಿಕಾರಿಗಳಿಗೆ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈ ಕುರಿತು ಜಿಲ್ಲೆಯ ಉದ್ಯಮಿಗಳ ಸಭೆ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಹವಾಮಾನ ವೈಪರೀತ್ಯದಿಂದ ಆಲಮಟ್ಟಿ ಪ್ರವಾಸ ರದ್ದುಗೊಳಿಸಿದ ಅವರು, ಹುಬ್ಬಳ್ಳಿಯ ವೇಮನ ಬೀದಿಯಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದಿನ ವಾರ ಮತ್ತೆ ಪ್ರಯಾಣ ಕೈಗೊಂಡು ಆಲಮಟ್ಟಿ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸುತ್ತೇನೆ ಎಂದರು.

ಸೆಪ್ಟಂಬರ್ 1 ರಿಂದ ತಿಂಗಳಲ್ಲಿ ಒಂದು ದಿನ ಉತ್ತರ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳ ಒಂದು ಗ್ರಾಮ ಪಂಚಾಯತಿ ಅಥವಾ ಹೋಬಳಿಯಲ್ಲಿ ರೈತರೊಂದಿಗೆ ಕಾಲ ಕಳೆದು ಅವರ ಸಮಸ್ಯೆಗಳಿಗೆ ರಾಜ್ಯ ಸರ್ಕಾರದಿಂದ ಸ್ಪಂದಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...