alex Certify
ಕನ್ನಡ ದುನಿಯಾ       Mobile App
       

Kannada Duniya

ಗುಡ್ ನ್ಯೂಸ್: ರೈತರ ಸಾಲ ಮನ್ನಾ ಮಾಡಲು ಕುಮಾರಸ್ವಾಮಿ ಮಾಸ್ಟರ್ ಪ್ಲಾನ್

ರಾಜ್ಯದ ರೈತರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಸಾಲ ಮನ್ನಾ ಯೋಜನೆ ಜಾರಿಗೊಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಸಕಲ ಸಿದ್ಧತೆ ನಡೆಸಿದ್ದು, ಇದಕ್ಕಾಗಿ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆನ್ನಲಾಗಿದೆ.

ಸಾಲ ಮನ್ನಾ ಮಾಡುವುದರಿಂದ ರಾಜ್ಯದ 40 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ಸಾಲ ಮನ್ನಾ ಯೋಜನೆ ಜಾರಿ ಜೊತೆಗೆ ಅನ್ನದಾತರಿಗೆ ಪೂರಕವಾಗುವಂತಹ ಹಲವು ಯೋಜನೆಗಳನ್ನು ಬಜೆಟ್ ನಲ್ಲಿ ಘೋಷಿಸುವ ನಿರೀಕ್ಷೆಯಿದೆ.

ಸಾಲ ಮನ್ನಾ ಯೋಜನೆಯಲ್ಲಿ ಅಕ್ರಮವಾಗುವುದನ್ನು ತಡೆಗಟ್ಟಲು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಣ ಹಾಕಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಈ ಕುರಿತು ಮಾಹಿತಿ ನೀಡುವ ಸಾಧ್ಯತೆ ಇದೆ.

ಕೆಲವರು ರೈತರ ಹೆಸರಿನಲ್ಲಿ ಬ್ಯಾಂಕ್ ಗಳಲ್ಲಿ ನಕಲಿ ಖಾತೆ ತೆರೆದು ಸಾಲ ಮನ್ನಾ ಯೋಜನೆಯ ಲಾಭ ಪಡೆಯಬಹುದಾದ ಸಾಧ್ಯತೆಗಳನ್ನು ಮನಗಂಡು ಈ ವಿಧಾನ ಅನುಸರಿಸುವ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...