alex Certify
ಕನ್ನಡ ದುನಿಯಾ       Mobile App
       

Kannada Duniya

ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ರೈತರಿಗೆ ಸಿಗುತ್ತಾ ಸಿಹಿ ಸುದ್ದಿ?

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನಾಳೆ ಬಜೆಟ್ ಮಂಡನೆ ಮಾಡಲಿದ್ದು, ಈ ಹಿಂದೆ ಜೆಡಿಎಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರೈತರ ಸಾಲ ಮನ್ನಾ ಮಾಡಲಿದ್ದಾರಾ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

ರೈತರ ಸಾಲ ಮನ್ನಾ ಕುರಿತಂತೆ ಕುಮಾರಸ್ವಾಮಿಯವರು ತಮ್ಮ ಈ ಹಿಂದಿನ ನಿಲುವಿಗೆ ಬದ್ಧವಾಗಿದ್ದು, ಇದಕ್ಕೆ ತಕ್ಕನಾಗಿ ಆರ್ಥಿಕ ಪರಿಸ್ಥಿತಿ ಸರಿದೂಗಿಸಿಕೊಂಡು ಹೋಗುವ ಸವಾಲು ಎದುರಾಗಿರುವ ಕಾರಣ ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಸಾಲ ಮನ್ನಾ ಮಾಡಿದರೂ ಕೆಲವೊಂದು ಶರತ್ತುಗಳನ್ನು ಹೇರುವ ಸಾಧ್ಯತೆ ಇದೆ.

ಜೊತೆಗೆ ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಜಾರಿಗೊಳಿಸಲಾಗಿದ್ದ ಕೆಲವೊಂದು ಜನಪ್ರಿಯ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರೈತರ ಸಾಲ ಮನ್ನಾವನ್ನು ಎರಡು ಹಂತಗಳಲ್ಲಿ ಮಾಡಲಾಗುತ್ತಿದೆ ಎಂದು ಹೇಳಲಾಗಿದ್ದು, ಮೊದಲ ಹಂತದಲ್ಲಿ ಸಹಕಾರಿ ಬ್ಯಾಂಕ್ ಗಳಲ್ಲಿ ಮಾಡಲಾಗಿರುವ ಸಾಲ ಮನ್ನಾ ಮಾಡಲಾಗುತ್ತಿದ್ದು, ದ್ವಿತೀಯ ಹಂತದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಒಟ್ಟಿನಲ್ಲಿ ನಾಳಿನ ಬಜೆಟ್ ಎಲ್ಲರಲ್ಲೂ ಕುತೂಹಲ ಮೂಡಿಸಿದ್ದು, ರೈತರು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಸಾಲ ಮನ್ನಾ ಆಗಲಿದೆಯೇ ಇಲ್ಲವೋ ಎಂಬುದು ತಿಳಿಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...