alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರೇ ತಾಳ್ಮೆ ಕಳೆದುಕೊಳ್ಳಬೇಡಿ: ಸಿಎಂ ನೀಡಿದ್ದಾರೆ ಈ ಸಿಹಿ ಸುದ್ದಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಯೋಜನೆ ಘೋಷಣೆ ಮಾಡಿದ್ದರೂ, ಅದಿನ್ನೂ ಕಾರ್ಯರೂಪಕ್ಕೆ ಬಾರದ ಕಾರಣ ಸಾಲಮನ್ನಾವಾಗುತ್ತದೋ ಇಲ್ಲವೋ ಎಂಬ ಆತಂಕದಲ್ಲಿ ರಾಜ್ಯದ ರೈತರಿದ್ದರು. ಈ ಆತಂಕಕ್ಕೆ ಪೂರಕವೆಂಬಂತೆ ರಾಷ್ಟ್ರೀಕೃತ ಬ್ಯಾಂಕ್ ಗಳು, ರಾಜ್ಯ ಸರ್ಕಾರದ ಸೂಚನೆಯನ್ನು ಧಿಕ್ಕರಿಸಿ ರೈತರಿಂದ ಸಾಲ ವಸೂಲಿ ಮಾಡಲು ಮುಂದಾಗಿದ್ದವು.

ಈ ಎಲ್ಲಾ ಬೆಳವಣಿಗೆಗಳಿಗೆ ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸ್ಪಷ್ಟ ಉತ್ತರ ನೀಡಿದ್ದಾರೆ. ಬೀದರ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರ ಎಲ್ಲಾ ರೈತರ ಸಾಲವನ್ನು ಮನ್ನಾ ಮಾಡುತ್ತದೆ. ಸಾಲ ಮನ್ನಾ ಹಣವನ್ನು ಸಹಕಾರಿ ಬ್ಯಾಂಕ್ ಗಳಿಗೆ ಜೂನ್ ಅಂತ್ಯದವರೆಗೆ ಪಾವತಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರಕ್ಕೆ ಹಣದ ಕೊರತೆ ಇಲ್ಲ. ಇದಕ್ಕಾಗಿಯೇ ಕಳೆದ ಬಜೆಟ್ ನಲ್ಲಿ 6,500 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಸಿದ್ದರಾಮಯ್ಯನವರ ಅವಧಿಯಲ್ಲಿ ಮಾಡಿದ್ದ ಸಾಲ ಮನ್ನಾದ ಹಣವನ್ನು ಪೂರ್ತಿ ಪಾವತಿಸಲಾಗಿದೆ. ಈ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಮಾಹಿತಿಯ ಕೊರತೆಯ ಕಾರಣದಿಂದ ಸುಳ್ಳು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...