alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ಮಧ್ಯಾಹ್ನದ ವೇಳೆಗೆ ರಾಜ್ಯದ ರೈತರಿಗೆ ಸಿಗುತ್ತೆ ಗುಡ್ ನ್ಯೂಸ್!

ರೈತರ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಬೆಳಗ್ಗೆ ರೈತ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಸಭೆ ನಡೆಸುತ್ತಿದ್ದು, ಮಧ್ಯಾಹ್ನದ ವೇಳೆಗೆ ಶುಭ ಸುದ್ದಿ ಹೊರಬೀಳುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಇಂದು ಬೆಳಗ್ಗೆ ಅವರ ಜೆ ಪಿ ನಗರದ ನಿವಾಸದಲ್ಲಿ ಭೇಟಿ ಮಾಡಿದ್ದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಈ ಮಾಹಿತಿ ನೀಡಿದ್ದು, ಸಾಲ ಮನ್ನಾ ಮಾಡಲು ಬದ್ಧರಾಗಿರುವ ಕುಮಾರಸ್ವಾಮಿಯವರು ಸಭೆ ಬಳಿಕ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಕುರಿತು ಪ್ರತಿಕ್ರಿಯಿಸಿದ ಜಿ.ಟಿ. ದೇವೇಗೌಡರು, ನಾನು ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ. ವರಿಷ್ಠರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...