alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಲಮನ್ನಾಗೂ ಮುನ್ನ ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ ಕೊಟ್ಟ ಸಿಎಂ

ರಾಜ್ಯದ ರೈತರ ಸಾಲಮನ್ನಾ ಮಾಡುವ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.

ಈ ಸಭೆಯಲ್ಲಿ ವಿವಿಧ ಜಿಲ್ಲೆಗಳ ರೈತ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಿದ್ದು, ತಮ್ಮ ತಮ್ಮ ಅಭಿಪ್ರಾಯಗಳನ್ನು ಮಂಡಿಸುತ್ತಿದ್ದಾರೆ.

ಸಭೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜ್ಯದ ರೈತರಿಗೆ ಮತ್ತೊಂದು ಸಿಹಿಸುದ್ದಿಯನ್ನು ನೀಡಿದ್ದು, ಯಶಸ್ವಿನಿ ಯೋಜನೆಯನ್ನು ಈ ಹಿಂದಿನಂತೆ ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದ್ದಾರೆ.

ರೈತ ಮುಖಂಡ ಬಸವರಾಜಪ್ಪನವರು ಯಶಸ್ವಿನಿ ಯೋಜನೆಯನ್ನು ಹಿಂಪಡೆಯದಂತೆ ಮನವಿ ಮಾಡಿಕೊಂಡ ವೇಳೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ತಾವು ಈಗಾಗಲೇ ಅಧಿಕಾರಿಗಳೊಂದಿಗೆ ಮಾತನಾಡಿ ಯಶಸ್ವಿನಿ ಯೋಜನೆಯನ್ನು ಮುಂದುವರಿಸಿಕೊಂಡು ಹೋಗುವಂತೆ ಸೂಚಿಸಿರುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...