alex Certify
ಕನ್ನಡ ದುನಿಯಾ       Mobile App
       

Kannada Duniya

ಆಡಳಿತದಲ್ಲಿ ಹಸ್ತಕ್ಷೇಪ ಮಾಡದಂತೆ ತಂದೆ-ಸಹೋದರನಿಗೆ ಸೂಚನೆ ನೀಡಿದ್ರಾ ಸಿಎಂ?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಹೊಸ ಸಮಸ್ಯೆಯೊಂದು ತಲೆದೋರಿದೆ. ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಸಹೋದರ ಹೆಚ್.ಡಿ. ರೇವಣ್ಣ ಇತರೆ ಸಚಿವರ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡುತ್ತಿರುವುದು ಕುಮಾರಸ್ವಾಮಿಯವರಿಗೆ ತಲೆನೋವಾಗಿ ಪರಿಣಮಿಸಿದೆ ಎನ್ನಲಾಗಿದೆ.

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರತ್ನಪ್ರಭಾ ಹಾಗೂ ಡಿಜಿ ಐಜಿಪಿ ನೀಲಮಣಿ ರಾಜು, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪದ್ಮನಾಭನಗರದ ನಿವಾಸಕ್ಕೆ ಭೇಟಿ ನೀಡಿದ್ದು, ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ದೇವೇಗೌಡರು ‘ಸೂಪರ್ ಸಿಎಂ’ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಇದೀಗ, ಸಹೋದರ ಹೆಚ್.ಡಿ. ರೇವಣ್ಣ ತಮಗೆ ಸಂಬಂಧವಿಲ್ಲದ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು, ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸುತ್ತಿರುವುದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬೇಸರಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ತಂದೆ ಹೆಚ್.ಡಿ. ದೇವೇಗೌಡ ಹಾಗೂ ಸಹೋದರ ಹೆಚ್.ಡಿ. ರೇವಣ್ಣನವರಿಗೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡದಂತೆ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...