alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ನಾಯಕರ ಹೋರಾಟಕ್ಕೆ ಹೊಸ ‘ಅಸ್ತ್ರ’ ಕೊಟ್ಟರಾ ಸಿಎಂ…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಈ ಸರ್ಕಾರದ ವಿರುದ್ಧ ಇದುವರೆಗೆ ಮಾಧ್ಯಮಗಳಲ್ಲಿ ಟೀಕೆ ಮಾಡುತ್ತಾ ಬಂದಿದ್ದ ಪ್ರತಿಪಕ್ಷ ಬಿಜೆಪಿ ನಾಯಕರು, ಈಗ ಮುಖ್ಯಮಂತ್ರಿಯವರು ನೀಡಿದ ಒಂದು ಹೇಳಿಕೆಯ ಕಾರಣಕ್ಕಾಗಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ.

ತಮ್ಮ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆಂಬ ಆಕ್ರೋಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಸಾರ್ವಜನಿಕ ಸಭೆಯೊಂದರಲ್ಲಿ ಬಿಜೆಪಿ ವಿರುದ್ಧ ದಂಗೆ ಹೇಳುವಂತೆ ಕರೆ ನೀಡಿದ್ದರು.

ಇದೇ ಮಾತು ಈಗ ಬಿಜೆಪಿ ನಾಯಕರು ಬೀದಿಗಿಳಿದು ಹೋರಾಟ ಮಾಡಲು ಕಾರಣವಾಗಿದ್ದು, ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಮುಖ್ಯಮಂತ್ರಿಗಳೇ ಇಂತಹ ಹೇಳಿಕೆ ನೀಡಿರುವುದರಿಂದ ಈಗ ರಾಜ್ಯಪಾಲರಿಗೆ ದೂರು ನೀಡಲು ಮುಂದಾಗಿದ್ದಾರೆ.

ಬಿಜೆಪಿ ನಾಯಕರು ಬೀದಿಗಿಳಿದು ಹೋರಾಟ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ತಮ್ಮ ಹೇಳಿಕೆ ಮೂಲಕ ಹೊಸ ಅಸ್ತ್ರವೊಂದನ್ನು ಕೊಟ್ಟಂತಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಈ ಹೇಳಿಕೆ ಪ್ರತಿದ್ವನಿಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...