alex Certify
ಕನ್ನಡ ದುನಿಯಾ       Mobile App
       

Kannada Duniya

ರಸ್ತೆ ಮಾರ್ಗವಾಗಿ ಶೃಂಗೇರಿಗೆ ತೆರಳಿದ ಸಿಎಂ

ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಶೃಂಗೇರಿಗೆ ಭೇಟಿ ನೀಡಬೇಕಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಭೇಟಿಯನ್ನು ಮುಂದೂಡಿ, ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರ ನಿವಾಸಕ್ಕೆ ದೌಡಾಯಿಸಿದ್ದರು.

ಸಿದ್ದರಾಮಯ್ಯನವರ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬಿಜೆಪಿಯ ‘ಆಪರೇಷನ್ ಕಮಲ’ಕ್ಕೆ ಪ್ರತಿಯಾಗಿ ಮುಂದೆ ಅನುಸರಿಸಬೇಕಿರುವ ಮಾರ್ಗಗಳ ಕುರಿತು ಚರ್ಚೆ ನಡೆಸಿದ್ದರು.

ಇದೀಗ ಮುಖ್ಯಮಂತ್ರಿಗಳ ವೇಳಾಪಟ್ಟಿ ಮತ್ತೆ ಬದಲಾಗಿದ್ದು, ರಸ್ತೆ ಮಾರ್ಗದಲ್ಲಿಯೇ ಕುಮಾರಸ್ವಾಮಿಯವರು ಶೃಂಗೇರಿಗೆ ತೆರಳುತ್ತಿದ್ದಾರೆ. ಇಂದು ರಾತ್ರಿ ಶೃಂಗೇರಿ ತಲುಪಲಿರುವ ಮುಖ್ಯಮಂತ್ರಿಗಳು ಬೆಳಗಿನ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...