alex Certify
ಕನ್ನಡ ದುನಿಯಾ       Mobile App
       

Kannada Duniya

‘ದಂಗೆ’ ಹೇಳಿಕೆ ನೀಡಿ ಇಕ್ಕಟ್ಟಿಗೆ ಸಿಲುಕಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಮುಂದಾಗಿರುವ ಬಿಜೆಪಿ ನಡೆಗೆ ಆಕ್ರೋಶ ವ್ಯಕ್ತಪಡಿಸಿ, ಇದರ ವಿರುದ್ಧ ಸಾರ್ವಜನಿಕರು ದಂಗೆಯೇಳುವಂತೆ ಬಹಿರಂಗ ಕರೆ ನೀಡಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಈಗ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಮೈತ್ರಿ ಸರ್ಕಾರದ ಮಿತ್ರ ಪಕ್ಷವಾದ ಕಾಂಗ್ರೆಸ್ ನ ಕೆಲ ಸಚಿವರೇ ಮುಖ್ಯಮಂತ್ರಿಯವರ ಈ ಹೇಳಿಕೆಗೆ ಬೇಸರಗೊಂಡಿದ್ದಾರೆನ್ನಲಾಗಿದ್ದು, ಈ ಅಸಮಾಧಾನವನ್ನು ತಮ್ಮ ಆಪ್ತರ ಮುಂದೆ ವ್ಯಕ್ತಪಡಿಸಿದ್ದಾರೆಂದು ಹೇಳಲಾಗಿದೆ.

ಕುಮಾರಸ್ವಾಮಿಯವರು ಈಗ ಸಾಂವಿಧಾನಿಕ ಹುದ್ದೆಯಲ್ಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಹೊಣೆ ಸರ್ಕಾರದ ಮೇಲಿದೆ. ಇಂತಹ ಪರಿಸ್ಥಿತಿಯಲ್ಲಿ ದಂಗೆ ಏಳುವ ಕರೆ ನೀಡುವ ಮೂಲಕ ಪ್ರತಿ ಪಕ್ಷದವರಿಗೆ ಹೊಸ ಅಸ್ತ್ರ ಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಸಚಿವರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲೂ ಸಚಿವರುಗಳು, ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ತಮ್ಮ ಅಸಮಾಧಾನ ತೋರ್ಪಡಿಸಿಕೊಂಡಿದ್ದಾರೆಂದು ಹೇಳಲಾಗಿದ್ದು, ದಂಗೆ ಏಳುವ ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈಗ ಮಿತ್ರಪಕ್ಷದ ಸಚಿವರಿಂದಲೇ ಅಸಮಾಧಾನದ ಮಾತು ಕೇಳಬೇಕಾಗಿ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...