alex Certify
ಕನ್ನಡ ದುನಿಯಾ       Mobile App
       

Kannada Duniya

ಮೈತ್ರಿ ಸರ್ಕಾರ ಕುಸಿದು ಬೀಳುವ ಸೂಚನೆ ನೀಡಿದ್ರಾ ಜೆಡಿಎಸ್ ಶಾಸಕ?

ಖಾತೆ ಹಂಚಿಕೆ ಹಾಗೂ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮಧ್ಯೆ ಹಗ್ಗಜಗ್ಗಾಟ ನಡೆದಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಲಾಭ ಪಡೆಯಲು ಬಿಜೆಪಿ ಹವಣಿಸುತ್ತಿದೆ ಎಂಬ ಮಾಹಿತಿಯನ್ನು ರಾಜ್ಯ ಗುಪ್ತಚರ ಇಲಾಖೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನೀಡಿದೆ ಎನ್ನಲಾಗಿತ್ತು.

ಇದರ ಮಧ್ಯೆಯೂ ಖಾತೆ ಹಂಚಿಕೆ ಗೊಂದಲ ಮುಂದುವರೆದಿದ್ದು, ಹಣಕಾಸು ಇಲಾಖೆಗೆ ಪಟ್ಟು ಹಿಡಿದಿರುವ ಕಾಂಗ್ರೆಸ್ ನಾಯಕರಿಂದ ಗೊಂದಲ ಸೃಷ್ಟಿಯಾಗುತ್ತಿದೆ. ಹೀಗಾದಲ್ಲಿ ಮೈತ್ರಿ ಮುಂದುವರೆಯುವುದು ಕಷ್ಟ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳುವ ಮೂಲಕ ಮೈತ್ರಿ ಮುರಿದು ಬೀಳುವ ಸೂಚನೆಯನ್ನು ನೀಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಶ್ರೀರಂಗಪಟ್ಟಣ ಜೆಡಿಎಸ್ ಶಾಸಕರೂ ಆಗಿರುವ ರವೀಂದ್ರ ಶ್ರೀಕಂಠಯ್ಯ, ಸಿಎಂ ಆದವರೇ ಹಣಕಾಸು ಇಲಾಖೆಯನ್ನು ತಮ್ಮ ಬಳಿ ಇಟ್ಟುಕೊಳ್ಳುವುದು ವಾಡಿಕೆ. ಹಣಕಾಸು ಖಾತೆ ಇಲ್ಲವಾದರೆ ಸಾಲ ಮನ್ನಾ ಮಾಡುವುದು ಕಷ್ಟವಾಗುತ್ತದೆ. ಆದರೆ ಹಣಕಾಸು ಇಲಾಖೆ ಬೇಕೆಂದು ಪಟ್ಟು ಹಿಡಿದಿರುವ ಕಾಂಗ್ರೆಸ್ ನವರು ಗೊಂದಲ ಸೃಷ್ಟಿಸುತ್ತಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವುಗಳು ಬದ್ಧ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...