alex Certify
ಕನ್ನಡ ದುನಿಯಾ       Mobile App
       

Kannada Duniya

ಕುಮಾರಸ್ವಾಮಿಯವರ ನಿವಾಸದಲ್ಲಿ ಸಂಭ್ರಮದ ವಾತಾವರಣ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ಸಂಜೆ 4.30 ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಕಾಂಗ್ರೆಸ್ ನ ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದಕ್ಕಾಗಿ ಈಗಾಗಲೇ ಭರ್ಜರಿ ಸಿದ್ಧತೆ ನಡೆದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಲಕ್ಷಾಂತರ ಸಂಖ್ಯೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವ ನಿರೀಕ್ಷೆಯಿದೆ.

ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜೆಪಿ ನಗರದ ನಿವಾಸದಲ್ಲಿ ಸಂಭ್ರಮ ಮನೆ ಮಾಡಿದ್ದು, ತಳಿರು-ತೋರಣಗಳಿಂದ ಅಲಂಕರಿಸಲಾಗಿದೆ. ಜಾನಪದ ಕಲಾ ತಂಡಗಳು ಪ್ರದರ್ಶನ ನೀಡುತ್ತಿದ್ದು, ಸಂಭ್ರಮವನ್ನು ಇನ್ನಷ್ಟು ಕಳೆಗಟ್ಟುವಂತೆ ಮಾಡಿವೆ.

ಇಂದು ಬೆಳಗ್ಗೆಯಿಂದಲೇ ಕುಮಾರಸ್ವಾಮಿ ಅವರ ನಿವಾಸದಲ್ಲಿ ಪೂಜೆ, ಹೋಮ-ಹವನಗಳು ನಡೆದಿದ್ದು, ಇದಾದ ಬಳಿಕ ನಿಯೋಜಿತ ಮುಖ್ಯಮಂತ್ರಿಗಳು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆಯಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...