alex Certify
ಕನ್ನಡ ದುನಿಯಾ       Mobile App
       

Kannada Duniya

ಬಹಿರಂಗವಾಗಿ ಕಿತ್ತಾಡಿಕೊಂಡಿದ್ದ ಮಹಿಳಾ ಅಧಿಕಾರಿಗಳಿಗೆ ಸಿಎಂ ಬುದ್ದಿಮಾತು

ಶಿಕ್ಷಣ ಸಚಿವರ ಸಮ್ಮುಖದಲ್ಲೇ ಕಿತ್ತಾಡಿಕೊಂಡಿದ್ದ ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳನ್ನು ತಮ್ಮ ಗೃಹ ಕಚೇರಿ ‘ಕೃಷ್ಣಾ’ ಗೆ ಕರೆಸಿಕೊಂಡಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬುದ್ದಿಮಾತು ಹೇಳಿದ್ದಾರೆ.

ಪ್ರಾಥಮಿಕ ಶಿಕ್ಷಣ ಸಚಿವ ಮಹೇಶ್ ಅವರ ಸಮ್ಮುಖದಲ್ಲೇ ಶಿಕ್ಷಣ ಇಲಾಖೆ ಆಯುಕ್ತೆ ಶಾಲಿನಿ ರಜನೀಶ್ ಹಾಗೂ ಪಿಯು ಶಿಕ್ಷಣ ಕೇಂದ್ರದ ನಿರ್ದೇಶಕಿ ಸಿ. ಶಿಖಾ ಹೊಸ ಪಿಯು ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಪರಸ್ಪರ ವಾಗ್ದಾಳಿ ನಡೆಸಿದ್ದರು.

ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ಇಂದು ಇಬ್ಬರನ್ನೂ ತಮ್ಮ ಕಚೇರಿಗೆ ಕರೆಸಿಕೊಂಡು ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಇನ್ನು ಮುಂದೆ ಈ ರೀತಿಯ ವರ್ತನೆ ತೋರದಂತೆ ತಾಕೀತು ಮಾಡಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...