alex Certify
ಕನ್ನಡ ದುನಿಯಾ       Mobile App
       

Kannada Duniya

ಕುಮಾರಸ್ವಾಮಿ ವಿರುದ್ಧ ಹತ್ಯೆ ಸಂಚಿನ ಆರೋಪ ಮಾಡಿದ್ದರಾ ರೆಡ್ಡಿ ಬ್ರದರ್ಸ್…?

ನವೆಂಬರ್ 3 ರಂದು ರಾಜ್ಯದಲ್ಲಿ ನಡೆಯಲಿರುವ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಕಣ ರಂಗೇರುತ್ತಿದ್ದು, ರಾಜಕೀಯ ನಾಯಕರುಗಳ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ.

ಈ ಮಧ್ಯೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಧು ಬಂಗಾರಪ್ಪನವರ ಪರ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪೋಟಕ ಸಂಗತಿಯೊಂದನ್ನು ಬಿಚ್ಚಿಟ್ಟಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು, ಈ ಹಿಂದೆ ತಾವು ಮುಖ್ಯ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ರೆಡ್ಡಿ ಸಹೋದರರು ನಾನು ಅವರುಗಳ ಕೊಲೆಗೆ ಸಂಚು ರೂಪಿಸಿದ್ದೇನೆ ಎಂದು ಬಳ್ಳಾರಿಯಲ್ಲಿ ದೂರು ನೀಡಿದ್ದರು. ಆಗ ಯಡಿಯೂರಪ್ಪನವರು ನನ್ನ ನೆರವಿಗೆ ಬರಲಿಲ್ಲ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...