alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ‘ಅತಿಥಿ ದೇವೋಭವ’

ಮುಖ್ಯಮಂತ್ರಿ ಕುಮಾರಸ್ವಾಮಿ,  ಜನತಾ ದರ್ಶನ ಆರಂಭಿಸಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಜೊತೆ ಕೈ ಜೋಡಿಸಿ ಮೈತ್ರಿಕೂಟ ಸರ್ಕಾರ ರಚಿಸಿರುವ ಕುಮಾರಸ್ವಾಮಿಯವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದು, ಹಿಂದಿನ ಅವಧಿಯಂತೆ ಈ ಬಾರಿಯೂ ಜನತಾ ದರ್ಶನ ಮಾಡಲಿದ್ದಾರೆ.

ಜನತಾ ದರ್ಶನದ ಮೂಲಕ ಮುಖ್ಯಮಂತ್ರಿಗಳ ಭೇಟಿಗಾಗಿ ಬರುವ ರಾಜ್ಯದ ವಿವಿಧ ಭಾಗದ ಜನರಿಗೆ ಅತಿಥಿಗಳಂತೆ ಸತ್ಕರಿಸಿ ಅವರಿಗೆ ಉಪಹಾರ ಹಾಗೂ ಪಾನೀಯಗಳ ವ್ಯವಸ್ಥೆ ಮಾಡಲು ಸೂಚಿಸಲಾಗಿದ್ದು, ಅದರಂತೆ ಈ ಕಾರ್ಯ ಇಂದಿನಿಂದ ಆರಂಭವಾಗಿದೆ.

ಮುಖ್ಯಮಂತ್ರಿಗಳ ಭೇಟಿಗಾಗಿ ಬರುವವರಿಗೆ ಮಜ್ಜಿಗೆ, ತಂಪಾದ ನೀರು, ಬಿಸ್ಕೆಟ್ ಸೇರಿದಂತೆ ಉಪಹಾರಗಳ ವ್ಯವಸ್ಥೆಯನ್ನು ಮಾಡಲಾಗುತ್ತಿದ್ದು, ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಸೂಚಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...