alex Certify
ಕನ್ನಡ ದುನಿಯಾ       Mobile App
       

Kannada Duniya

ತವರಿನಲ್ಲಿ ದೇವರ ದರ್ಶನ ಪಡೆದ ಕುಮಾರಸ್ವಾಮಿ

ನಿಯೋಚಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪದಗ್ರಹಣಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ಕುಮಾರಸ್ವಾಮಿ ರೇಷ್ಮೆ ಪಂಚೆ, ಶರ್ಟ್ ಖರೀದಿ ಮಾಡಿದ್ದಾರೆ. ಚಪ್ಪಲಿ ಧರಿಸದೇ ಪ್ರಮಾಣ ವಚನ ಸ್ವೀಕರಿಸಲು ಕುಮಾರಸ್ವಾಮಿ ಮುಂದಾಗಿದ್ದಾರೆ. 2006ರಲ್ಲಿಯೂ ಕುಮಾರಸ್ವಾಮಿ ಸರಳ ಉಡುಪಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ಹೊಳೆನರಸೀಪುರಕ್ಕೆ ಭೇಟಿ ನೀಡಿರುವ ಕುಮಾರಸ್ವಾಮಿ ಶ್ರೀಲಕ್ಷ್ಮಿ ನರಸಿಂಹ ದೇವರ ದರ್ಶನ ಪಡೆದ್ರು. ಹರದನಹಳ್ಳಿಗೆ ಭೇಟಿ ನೀಡಿ ಅವ್ರು ಶಿವನ ದರ್ಶನ ಪಡೆಯಲಿದ್ದಾರೆ. ಹೊಳೆನರಸೀಪುರದಲ್ಲಿ ಮಾತನಾಡಿದ ಕುಮಾರಸ್ವಾಮಿ  ದೇವರ ಅನುಗ್ರಹ ಹಾಗೂ ತಂದೆ-ತಾಯಿಯ ಆಶೀರ್ವಾದದಿಂದ ಸಿಎಂ ಆಗಿದ್ದೇನೆ ಎಂದ್ರು.

ಮಧ್ಯಾಹ್ನ ದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಯಾವತಿಯನ್ನು ಭೇಟಿ ಮಾಡಲಿದ್ದೇನೆಂದು ಕುಮಾರಸ್ವಾಮಿ ಹೇಳಿದ್ದಾರೆ. ಸರ್ಕಾರ ರಚನೆಗೆ ಅವಕಾಶ ನೀಡಿದ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ. ಐದು ವರ್ಷ ಭದ್ರ ಆಡಳಿತ ನೀಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದೇನೆಂದು ಕುಮಾರಸ್ವಾಮಿ ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...