alex Certify
ಕನ್ನಡ ದುನಿಯಾ       Mobile App
       

Kannada Duniya

15 ಸಚಿವ ಸ್ಥಾನಕ್ಕೆ ಹೆಚ್ಡಿಕೆ ಬೇಡಿಕೆ : ಜೆಡಿಎಸ್ ಗೆ ಸ್ಪೀಕರ್ ಸ್ಥಾನ

ನಿಯೋಜಿತ ಸಿಎಂ ಕುಮಾರಸ್ವಾಮಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೆ ಎಲ್ಲ ರೀತಿಯ ತಯಾರಿ ನಡೆಯುತ್ತಿದೆ. ವಿಧಾನಸೌಧದಲ್ಲಿ ವಿಶೇಷ ವೇದಿಕೆ ನಿರ್ಮಾಣವಾಗ್ತಿದ್ದು, ಸೌಧದ ಮೆಟ್ಟಿಲಿಗೆ ಪೂಜೆ ಮಾಡಲಾಗ್ತಿದೆ. ಈ ಮಧ್ಯೆ ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿದೆ.

ಜೆಡಿಎಸ್ 15 ಸಚಿವ ಸ್ಥಾನ ನೀಡುವಂತೆ ಬೇಡಿಕೆಯಿಟ್ಟಿದೆ. ಕುಮಾರಸ್ವಾಮಿ ಪಕ್ಷದ ಪ್ರಮುಖ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಜೊತೆ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದಾರೆ. ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡಿ ಎಂದು ತಮ್ಮ ಬೇಡಿಕೆಯನ್ನು ಕಾಂಗ್ರೆಸ್ ಹಿರಿಯ ನಾಯಕರ ಮುಂದಿಡಲಿದ್ದಾರೆ.

ಈ ಮಧ್ಯೆ ಹಿಲ್ಟನ್ ಹೊಟೇಲ್ ನಲ್ಲಿ ಕಾಂಗ್ರೆಸ್ ಶಾಸಕರ ಸಭೆ ನಡೆಯುತ್ತಿದೆ. ಸ್ಪೀಕರ್ ಸ್ಥಾನವನ್ನು ಯಾರಿಗೆ ನೀಡಬೇಕೆನ್ನುವ ಬಗ್ಗೆ ಚರ್ಚೆ ನಡೆದಿದೆ. ಜೆಡಿಎಸ್ ಶಾಸಕರಿಗೆ ಸ್ಪೀಕರ್ ಸ್ಥಾನ ನೀಡಲು ಶಾಸಕರು ಒಪ್ಪಿದ್ದಾರೆ ಎನ್ನಲಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...