alex Certify
ಕನ್ನಡ ದುನಿಯಾ       Mobile App
       

Kannada Duniya

ಜುಲೈ 2 ರಿಂದ ವಿಧಾನಮಂಡಲದ ಜಂಟಿ ಅಧಿವೇಶನ

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ ಚೊಚ್ಚಲ ಬಜೆಟ್ ಜುಲೈ 5 ರಂದು ಮಂಡನೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜುಲೈ ಎರಡರಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ.

ಜುಲೈ 2 ರಂದು ರಾಜ್ಯಪಾಲ ವಜುಭಾಯ್ ವಾಲಾ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದು, ಜುಲೈ 12 ರ ವರೆಗೂ ಅಧಿವೇಶನ ನಡೆಯಲಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಸೇರಿದಂತೆ ಹಲವು ಪ್ರಮುಖ ಘೋಷಣೆಗಳನ್ನು ಮಾಡುವ ಸಾಧ್ಯತೆಯಿದ್ದು, ಈ ಕಾರಣಕ್ಕಾಗಿ ಬಜೆಟ್ ಕುತೂಹಲ ಮೂಡಿಸಿದೆ.

ಕಳೆದ ಬಾರಿಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಕೆಲ ಜನಪ್ರಿಯ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವ ಸಾಧ್ಯತೆಯೂ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...