alex Certify
ಕನ್ನಡ ದುನಿಯಾ       Mobile App
       

Kannada Duniya

ಅರ್ಥವಾಗದವರಿಗೆ ಏನು ಹೇಳುವುದಕ್ಕೆ ಆಗುತ್ತೆ ಎಂದು ಬೇಸರ ವ್ಯಕ್ತಪಡಿಸಿದ ಸಿಎಂ

ಗುರುವಾರದಂದು ತಮ್ಮ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಕೇವಲ ಹಾಸನ, ರಾಮನಗರ ಹಾಗೂ ಮಂಡ್ಯ ಜಿಲ್ಲೆಗೆ ಮಾತ್ರ ಮುಖ್ಯಮಂತ್ರಿಗಳು ಪ್ರಾಶಸ್ತ್ಯ ನೀಡಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ್ದು, ಬಜೆಟ್ ಅರ್ಥಮಾಡಿಕೊಳ್ಳಲಾಗದವರಿಗೆ ಏನು ಹೇಳಲಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿಂದು ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು, ಈ ಹಿಂದೆ ಸಿದ್ದರಾಮಯ್ಯನವರು ತಮ್ಮ ಬಜೆಟ್ ನಲ್ಲಿ ಮೀನುಗಾರರ ಸಮಸ್ಯೆ ಗೆ 150 ಕೋಟಿ ಮೀಸಲಿಟ್ಟಿದ್ದರು. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕ್ಲಸ್ಟರ್ ನಿರ್ಮಾಣಕ್ಕೆ ಹಣ ಮೀಸಲಾಗಿದೆ. ತಮ್ಮ ಬಜೆಟ್ ಇದರ ಮುಂದುವರೆದ ಭಾಗವಾಗಿದೆ ಎಂದರು.

ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ರೂಪಿಸಲಾಗಿದೆ. ಇದನ್ನು ಅರ್ಥಮಾಡಿಕೊಳ್ಳದೆ ಟೀಕಿಸುವುದು ಸೂಕ್ತವಲ್ಲ ಎಂದು ಹೇಳಿದ ಮುಖ್ಯಮಂತ್ರಿಗಳು, ಟೀಕೆ ಮಾಡುತ್ತಿರುವವರು ವಿಧಾನಮಂಡಲದ ಉಭಯ ಸದನಗಳ ಅಧಿವೇಶನದಲ್ಲಿ ಚರ್ಚೆ ನಡೆಸಲಿ. ಆಗ ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...