alex Certify
ಕನ್ನಡ ದುನಿಯಾ       Mobile App
       

Kannada Duniya

ತಮ್ಮ ಹೆಸರು ಪ್ರಸ್ತಾಪವಾಗಿದ್ದಕ್ಕೆ ರಾಧಿಕಾ ಕುಮಾರಸ್ವಾಮಿ ಹೇಳಿದ್ದೇನು…?

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರಿದೆ. ಈಗಾಗಲೇ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಕಡೆ ಕ್ಷಣದಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ರಾಜಕೀಯ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿದ್ದು, ಇದು ವೈಯಕ್ತಿಕ ಮಟ್ಟದ ಟೀಕೆಗಳಿಗೂ ಕಾರಣವಾಗಿತ್ತು. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ, ರಾಧಿಕಾ ಕುಮಾರಸ್ವಾಮಿ ಅವರ ಹೆಸರನ್ನು ಪ್ರಸ್ತಾಪಿಸಿ, ಕುಮಾರಸ್ವಾಮಿಯವರು ಅವರನ್ನೇಕೆ ಪ್ರಚಾರ ಕಾರ್ಯಕ್ಕೆ ಕರೆ ತರುತ್ತಿಲ್ಲವೆಂದು ಪ್ರಶ್ನಿಸಿದ್ದರು. ಇದಕ್ಕೆ ತಿರುಗೇಟು ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ವೈಯಕ್ತಿಕ ವಿಚಾರ ಮಾತನಾಡುವುದು ಸರಿಯಿಲ್ಲವೆಂದಿದ್ದರು.

ಇದೀಗ ತಮ್ಮ ಹೆಸರು ಪ್ರಸ್ತಾಪವಾಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ರಾಧಿಕಾ ಕುಮಾರಸ್ವಾಮಿ, ಯಾರ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ, ಅದು ಅವರಿಬ್ಬರ ನಡುವಿನ ವಿಷಯ. ಇದನ್ನು ಅವರೇ ಬಗೆಹರಿಸಿಕೊಳ್ಳುತ್ತಾರೆ. ಸುಖಾಸುಮ್ಮನೆ ಮಧ್ಯೆ ಬಂದು ಬಲಿಪಶುವಾಗುವುದು ನನಗೆ ಇಷ್ಟವಿಲ್ಲ ಎಂದಿದ್ದಾರೆ. ಜೊತೆಗೆ ನಾನು, ನನ್ನ ಚಿತ್ರ ಬದುಕಿನ ಕುರಿತು ಹೆಚ್ಚು ಗಮನ ನೀಡುತ್ತಿದ್ದು, ಬೇರೆ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...