alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯಪಾಲರ ಲಭ್ಯತೆ ಆಧರಿಸಿ ದಿನಾಂಕ ನಿಗದಿ: ಹೆಚ್.ಡಿ.ಕೆ

ರಾಜ್ಯಪಾಲರ ಲಭ್ಯತೆಯನ್ನು ಆಧರಿಸಿ ಸಚಿವ ಸಂಪುಟ ಪದಗ್ರಹಣಕ್ಕೆ ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದ ಹೆಚ್.ಡಿ. ದೇವೇಗೌಡರ ನಿವಾಸದಲ್ಲಿ ನಡೆದ ಮಹತ್ವದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಸಂಪುಟ ಪ್ರಮಾಣವಚನ ಕಾರ್ಯಕ್ರಮವನ್ನು ಭಾನುವಾರ ಮಾಡುವ ಬಯಕೆ ನಮ್ಮದಾಗಿತ್ತು. ಆದರೆ, ರಾಜ್ಯಪಾಲರು ಲಭ್ಯವಿರದ ಕಾರಣ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಈಗ ರಾಜ್ಯಪಾಲರ ಭೇಟಿಗಾಗಿ ನಾನು ಮತ್ತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತೆರಳುತ್ತಿದ್ದು, ಸೂಕ್ತ ದಿನಾಂಕವನ್ನು ನಿಗದಿ ಮಾಡುವುದಾಗಿ ತಿಳಿಸಿದರು.

ರಾಜಪಾಲರ ಭೇಟಿಗಾಗಿ ನಾವು ತೆರಳುತ್ತಿದ್ದು, ಭಾನುವಾರವೇ ಪದಗ್ರಹಣ ಸಮಾರಂಭ ನಡೆಸಿಕೊಡುವಂತೆ ಮನವಿ ಮಾಡಲಾಗುವುದು. ಸಾಧ್ಯವಾಗದಿದ್ದರೆ ಸದ್ಯದಲ್ಲೇ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...