alex Certify
ಕನ್ನಡ ದುನಿಯಾ       Mobile App
       

Kannada Duniya

ರೈತರ ಹೋರಾಟಕ್ಕೆ ಮಣಿದ ಸಿಎಂ: ನ. 20 ರಂದು ಸಭೆ

ಬೆಳಗಾವಿಯಲ್ಲಿ ಹೋರಾಟ ನಡೆಸುತ್ತಿದ್ದ ರೈತರು, ಸುವರ್ಣ ಸೌಧದ ಬೀಗ ಹೊಡೆದಿದ್ದಕ್ಕೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಅವರುಗಳನ್ನು ಗೂಂಡಾಗಳು ಎಂದು ಕರೆಯುವ ಮೂಲಕ ರೈತ ಸಮುದಾಯದ ಆಕ್ರೋಶಕ್ಕೆ ಗುರಿಯಾಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ, ಈಗ ರೈತರ ಹೋರಾಟಕ್ಕೆ ಮಣಿದಿದ್ದಾರೆ.

ತಮ್ಮ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಸುವುದನ್ನು ಮನಗಂಡ ಕುಮಾರಸ್ವಾಮಿಯವರು, ಪ್ರತಿಭಟನಾನಿರತ ರೈತರ ವಿರುದ್ಧ ಯಾವುದೇ ಮೊಕದ್ದಮೆ ದಾಖಲಿಸಬೇಡಿ. ಅವರುಗಳೊಂದಿಗೆ ಮಾತುಕತೆ ನಡೆಸಿ ಎಂದು ಬೆಳಗಾವಿ ಜಿಲ್ಲಾಡಳಿತಕ್ಕೆ ಸೂಚಿಸಿದ್ದರು.

ಈ ಸಂಧಾನ ಸಭೆ ಈಗ ಯಶಸ್ವಿಯಾಗಿದ್ದು ಈ ಹಿನ್ನೆಲೆಯಲ್ಲಿ ನವೆಂಬರ್ 20 ರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಸಂಘದ ಮುಖಂಡರ ಸಭೆ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...