alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ನೇತೃತ್ವದ ನಿಯೋಗದ ಮನವಿಗೆ ಪ್ರಧಾನಿ ಸಕಾರಾತ್ಮಕ ಸ್ಪಂದನೆ

ನವದೆಹಲಿ: ಅತಿವೃಷ್ಟಿಯಿಂದ ಹಾನಿಗೀಡಾದ ಕೊಡಗು, ಕರಾವಳಿ ಭಾಗ ಹಾಗೂ ಬರ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ನೆರವನ್ನು ನೀಡುವಂತೆ ಕೋರಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ನಿಯೋಗ ಮಾಡಿದ ಮನವಿಗೆ ಪ್ರಧಾನಿ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ನೇತೃತ್ವದ ರಾಜ್ಯ ನಿಯೋಗ, ರಾಜ್ಯದ ವಿವಿಧೆಡೆ ಅತಿವೃಷ್ಟಿ ಹಾಗೂ ಒಳನಾಡಿನಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಬಗ್ಗೆ ಹಾಗೂ ರಾಜ್ಯಕ್ಕೂ ಕೇಂದ್ರ ತಂಡವನ್ನು ಕಳುಹಿಸಿ ಸಮೀಕ್ಷೆ ನಡೆಸುವಂತೆ ಮನವರಿಕೆ ಮಾಡಿಕೊಟ್ಟಿತು.

ಕೊಡಗು ಹಾಗೂ ನೆರೆಯ ಜಿಲ್ಲೆಗಳಿಗೆ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗಾಗಿ 2000 ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿ, ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದರು. ಇದಕ್ಕೆ ಪ್ರಧಾನಿ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಒಳನಾಡಿನ 17 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, ಈ ಕುರಿತೂ ನಷ್ಟದ ಪ್ರಮಾಣ ಅಂದಾಜು ಮಾಡಿ, ನಾಳೆ ನಡೆಯುವ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಕೇಂದ್ರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸುವುದಾಗಿ ನಿಯೋಗ ಇದೇ ವೇಳೆ ಪ್ರಧಾನಿಯವರಿಗೆ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...