alex Certify
ಕನ್ನಡ ದುನಿಯಾ       Mobile App
       

Kannada Duniya

ಇನ್ನೂ ಮುಂದುವರೆದಿದೆ ಸಚಿವ ಸಂಪುಟ ರಚನೆಯ ಹಗ್ಗಜಗ್ಗಾಟ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದು ವಾರ ಕಳೆಯುತ್ತ ಬಂದರೂ, ಸಚಿವ ಸಂಪುಟ ರಚನೆಯ ಕಸರತ್ತು ಇನ್ನೂ ಮುಗಿದಿಲ್ಲ. ಪ್ರಮುಖ ಖಾತೆಗಳಿಗಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಪಟ್ಟುಹಿಡಿದಿದ್ದು, ಹಗ್ಗಜಗ್ಗಾಟ ಹಾಗೆಯೇ ಮುಂದುವರೆದಿದೆ.

ಜೆಡಿಎಸ್ ಪಕ್ಷಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಲು ಬೇಷರತ್ ಬೆಂಬಲ ಘೋಷಿಸಿದ್ದ ಕಾಂಗ್ರೆಸ್, ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ತಮ್ಮ ಪಕ್ಷದ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ತನ್ನ ಅಸಲಿ ಆಟ ಆರಂಭಿಸಿದೆ.

ತಮ್ಮ ಪಕ್ಷ ಹೆಚ್ಚು ಸ್ಥಾನ ಗೆದ್ದಿರುವುದರಿಂದ ಸಚಿವ ಸ್ಥಾನದಲ್ಲಿ ಸಿಂಹಪಾಲು ಬೇಕೆಂಬ ಬೇಡಿಕೆಯಿಟ್ಟು ಅದನ್ನು ಗಿಟ್ಟಿಸಿಕೊಂಡಿರುವ ಕಾಂಗ್ರೆಸ್ ನಾಯಕರು, ಈಗ ಹಣಕಾಸು ಸೇರಿದಂತೆ ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿರುವುದು ಸಂಪುಟ ರಚನೆಗೆ ಕಗ್ಗಂಟಾಗಿ ಪರಿಣಮಿಸಿದೆ.

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಇರಾದೆ ಹೊಂದಿರುವ ಕಾಂಗ್ರೆಸ್ ಕೇಂದ್ರ ನಾಯಕರು, ಖಾತೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲವಾದರೂ ರಾಜ್ಯ ಕಾಂಗ್ರೆಸ್ ನಾಯಕರು ಮಾತ್ರ ತಮ್ಮ ಪಟ್ಟು ಸಡಿಲಿಸುತ್ತಿಲ್ಲವೆನ್ನಲಾಗಿದೆ.

ಹೀಗಾಗಿ ಈ ವಿಚಾರ ಕಾಂಗ್ರೆಸ್ ವರಿಷ್ಠರಿಗೂ ತಲೆನೋವಾಗಿ ಪರಿಣಮಿಸಿದ್ದು, ವಿದೇಶಕ್ಕೆ ತೆರಳಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ವದೇಶಕ್ಕೆ ಮರಳಿ ಬರುವವರೆಗೂ ಬಿಕ್ಕಟ್ಟು ಮುಂದುವರಿಯುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...