alex Certify
ಕನ್ನಡ ದುನಿಯಾ       Mobile App
       

Kannada Duniya

ಪಿ ಎಂ ವಿರುದ್ಧ ಕುಮಾರಸ್ವಾಮಿ ಗಂಭೀರ ಆರೋಪ

ಮೋದಿ ಸರ್ಕಾರದಿಂದ ಅಧಿಕಾರ ದುರುಪಯೋಗವಾಗ್ತಿದೆ ಎಂದು ಮಾಜಿ ಸಿಎಂ ಕುಮರಾಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಆನಂದ್ ಸಿಂಗ್ ರನ್ನು ಬೆದರಿಸುವ ಯತ್ನ ಬಿಜೆಪಿಯಿಂದ ನಡೆದಿದೆ. ಆನಂದ್ ಸಿಂಗ್ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಛೂ ಬಿಡುತ್ತಿದ್ದಾರೆ. ಈ ಮೂಲಕ ಆನಂದ್ ಸಿಂಗ್ ರನ್ನು ಬಿಜೆಪಿಗೆ ಸೆಳೆಯುವ ಯತ್ನ ನಡೆದಿದೆ ಎಂದು ಕುಮಾರಸ್ವಾಮಿ ದೂರಿದ್ದಾರೆ.

ಶಾಂಗ್ರಿಲಾ ಹೊಟೇಲ್ ನಲ್ಲಿ ಮಾತನಾಡಿದ ಕುಮಾರಸ್ವಾಮಿ ಬಿಜೆಪಿ ನಡೆ ವಿರುದ್ಧ ಕಿಡಿ ಕಾರಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಆಪರೇಷನ್ ನ ಸೂತ್ರದಾರ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಸದ್ಯ ಶಾಸಕರನ್ನು ರಕ್ಷಿಸಿಕೊಳ್ಳುವುದು ನಮ್ಮ ಮುಂದಿರುವ ದೊಡ್ಡ ಸವಾಲು. ಎಲ್ಲ ಶಾಸಕರೂ ನಮ್ಮ ಜೊತೆಗಿದ್ದಾರೆ. ಆದ್ರೆ ಬಿಜೆಪಿ ಅವರನ್ನು ಸೆಳೆಯಲು ಯತ್ನ ನಡೆಸುತ್ತಿದೆ ಎಂದು ಕುಮಾರಸ್ವಾಮಿ ದೂರಿದ್ದಾರೆ.

ಈ ಮಧ್ಯೆ ಬಿಜೆಪಿ ಸರ್ಕಾರ ರಚನೆ ವಿರುದ್ಧ ಕಾಂಗ್ರೆಸ್-ಜೆಡಿಎಸ್ ಹೋರಾಟ ಮುಂದುವರೆಸಿದೆ. ಬೆಂಗಳೂರಿನಲ್ಲಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಒಂದಾಗಿ ಹೋರಾಟ ನಡೆಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...