alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಬಾರಿಯ ದಸರಾ ಕುರಿತು ಕುಮಾರಸ್ವಾಮಿ ಹೇಳಿದ್ದೇನು?

ಈ ಬಾರಿಯ ದಸರಾ ವಿಭಿನ್ನವಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಹೇಳಿದ್ದಾರೆ. ಸಿಎಂ ಹೀಗೆ ಹೇಳಲು ಕಾರಣವೇನು ಗೊತ್ತಾ…?

ಕಳೆದ ದಸರಾಗಳಿಗಿಂತ ಈ ಬಾರಿಯ ದಸರಾ ಕುಮಾರಸ್ವಾಮಿಗೆ ವಿಭಿನ್ನವಾಗಿ ಕಾಣಿಸಿಕೊಂಡಿದೆಯಂತೆ. ಹಾಗೇ ದಸರಾ ಕಾರ್ಯಕ್ರಮಗಳನ್ನು ವರ್ಷವಿಡೀ ನಡೆಸುವ ಚಿಂತನೆಯನ್ನು ಕೂಡ ಮಾಡಲಾಗುತ್ತಿದೆ ಎಂದು ಲಲಿತಮಹಲ್ ಪ್ಯಾಲೇಸ್ ನಲ್ಲಿ ಕುಮಾರಸ್ವಾಮಿ ಹೇಳಿದ್ದಾರೆ.

ಹಾಗೇ ಪ್ರವಾಸೋದ್ಯಮಕ್ಕೆ ಹೆಚ್ಚು ಒತ್ತನ್ನು ಕೂಡ ನೀಡಲಾಗುವುದು, ಇದರಿಂದ ಸಾಕಷ್ಟು ಜನರಿಗೆ ಉದ್ಯೋಗ ನೀಡಲು ಸಹಾಯವಾಗುತ್ತದೆಯಂತೆ. ಇದರ ಕುರಿತು ಬ್ಲೂ ಪ್ರಿಂಟ್ ಸಿದ್ಧಪಡಿಸಲು ಕೂಡ ಹೇಳಿದ್ದಾರಂತೆ ಸಿಎಂ.

ಹಾಗೇ ಓಪನ್ ಸ್ಟ್ರೀಟ್ ಫೆಸ್ಟಿವಲ್ ನಲ್ಲಿ ನಡೆದ ಲೈಂಗಿಕ ಕಿರುಕುಳದ ಬಗ್ಗೆ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಮಸ್ಯೆ ಹೇಳಿಕೊಂಡ ಹೆಣ್ಣುಮಕ್ಕಳಲ್ಲೂ ಕುಮಾರಸ್ವಾಮಿ ಕ್ಷಮೆ ಕೋರಿದ್ದಾರೆ.

ಹಾಗೇ ಓಪನ್ ಸ್ಟ್ರೀಟ್ ಫೆಸ್ಟಿವಲ್ ಬಗ್ಗೆ ಆಕ್ಷೇಪವಿದ್ದರೆ ಅದನ್ನು ರದ್ದುಪಡಿಸುವುದಾಗಿಯೂ ಹೇಳಿದ್ದಾರೆ. ಇನ್ನು ರಾಜವಂಶಸ್ಥೆ ಪ್ರಮೋದಾದೇವಿ ಅವರ ತಾಯಿಯ ನಿಧನಕ್ಕೆ ಸಂತಾಪವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...