alex Certify
ಕನ್ನಡ ದುನಿಯಾ       Mobile App
       

Kannada Duniya

82 ದಿನದಲ್ಲಿ 40 ದೇವಾಲಯ ಸುತ್ತಿದ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 82 ದಿನಗಳಲ್ಲಿ 40 ದೇವಾಲಯಗಳನ್ನು ಸಿಎಂ ಕುಮಾರಸ್ವಾಮಿ ಸುತ್ತಿದ್ದಾರೆ. ಅಧಿಕಾರ ಪಡೆದುಕೊಂಡಂದಿನಿಂದ ಶೇ.50 ರಷ್ಟು ದಿನವನ್ನು ಟೆಂಪಲ್‌ ರನ್‌ನಲ್ಲೇ ಕಳೆದಿದ್ದಾರೆ.

ಕುಮಾರಸ್ವಾಮಿ ಜೊತೆಗೆ ತಂದೆ, ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡ, ತಾಯಿ ಚೆನ್ನಮ್ಮ, ಪತ್ನಿಅನಿತಾ ಕುಮಾರಸ್ವಾಮಿ ದೇವಾಲಯದಲ್ಲಿ ಪೂಜಾ ಕೈಂಕರ್ಯಗಳಲ್ಲಿ ತೊಡಗಿದ್ದಾರೆ. ಹಾಸನದ ಹರದನಹಳ್ಳಿಯಲ್ಲಿನ ಈಶ್ವರ ದೇವಸ್ಥಾನದಲ್ಲಿ ಸೋಮವಾರದಂದು ಸುಮಾರು ಒಂದೂವರೆ ಗಂಟೆಗಳ ಕಾಲ ಧಾರ್ಮಿಕ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿಯವರ ಕುಟುಂಬ ಪಾಲ್ಗೊಂಡಿದೆ.

ಇದಲ್ಲದೆ ಆದಿಚುಂಚನಗಿರಿ ಸೇರಿದಂತೆ ಇನ್ನಿತರ 6 ಮಠಗಳಿಗೂ ಕುಮಾರಸ್ವಾಮಿ ತಾವು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಭೇಟಿ ನೀಡಿದ್ದಾರೆ. ಜೋತಿಷ್ಯ ಹಾಗೂ ಧಾರ್ಮಿಕ ವಿಚಾರದಲ್ಲಿ ಅಪಾರವಾದ ನಂಬಿಕೆ ಇರುವುದರಿಂದ ಆಗಾಗ್ಗೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ ಎಂದು ಕುಟುಂಬದ ಆಪ್ತರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...