alex Certify
ಕನ್ನಡ ದುನಿಯಾ       Mobile App
       

Kannada Duniya

ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸದ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸದ ಅಧಿಕಾರಿಗಳ ವಿರುದ್ಧ ಕಿಡಿಕಾರಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಇಂತಹ ಅಧಿಕಾರಿಗಳು ಇನ್ನು 15 ದಿನಗಳೊಳಗಾಗಿ ತಮ್ಮ ತಪ್ಪನ್ನು ತಿದ್ದಿಕೊಳ್ಳಬೇಕು. ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ನಾನು ಜವಾನನಿಂದ ಹಿಡಿದು ಎಲ್ಲರನ್ನೂ ಅಣ್ಣಾ ಎಂದೇ ಮಾತನಾಡಿಸುತ್ತೇನೆ. ಇದನ್ನು ನನ್ನ ದೌರ್ಬಲ್ಯವೆಂದು ಅಧಿಕಾರಿಗಳು ಭಾವಿಸಬಾರದು. ನನಗೆ ಎರಡು ಮುಖಗಳಿದ್ದು, ಸಾಲ ಮನ್ನಾ ಮಾಡುವ ವೇಳೆ ಒಂದು ಮುಖ ಮಾತ್ರ ಪರಿಚಯಿಸಿದ್ದೇನೆ. ಅಭಿವೃದ್ಧಿ ಕಾರ್ಯಗಳಿಗೆ ಅಧಿಕಾರಿಗಳು ನಿರ್ಲಕ್ಷ ತೋರಿದರೆ ನನ್ನ ಎರಡನೇ ಮುಖವನ್ನು ತೋರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಭವಿಷ್ಯ ಅತಂತ್ರವಾಗಿದೆ ಎಂದು ಭಾವಿಸಿ ಕೆಲ ಅಧಿಕಾರಿಗಳು ನಿರ್ಲಕ್ಷ್ಯದ ಧೋರಣೆ ತೋರುತ್ತಿದ್ದಾರೆ. ರಾಜಕೀಯದಲ್ಲಿ ಪಳಗಿರುವ ತಮಗೆ, ಸರ್ಕಾರ ಉಳಿಸಿಕೊಳ್ಳುವುದು ಗೊತ್ತಿದೆ ಎಂದು ಹೇಳಿದ ಕುಮಾರಸ್ವಾಮಿಯವರು, ಅಧಿಕಾರಿಗಳ ನಿರ್ಲಕ್ಷದ ಧೋರಣೆಯನ್ನು ಸಹಿಸುವುದು ಸಾಧ್ಯವಿಲ್ಲವೆಂದು ಗುಡುಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...