alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು ನಿಲ್ಲಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಿಎಂ

ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ತಮ್ಮ ಜೆಪಿ ನಗರ ನಿವಾಸದಿಂದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುವ ವೇಳೆ ಮಾರ್ಗ ಮಧ್ಯದಲ್ಲಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಘಟನೆ ನಡೆದಿದೆ.

ಕುಮಾರಸ್ವಾಮಿಯವರು ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಮಾರ್ಗ ಮಧ್ಯೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ದೃಶ್ಯ ಕಂಡುಬಂದಿದೆ.

ಕೂಡಲೇ ತಮ್ಮ ಚಾಲಕನಿಗೆ ಕಾರು ನಿಲ್ಲಿಸಲು ಸೂಚಿಸಿದ ಕುಮಾರಸ್ವಾಮಿಯವರು, ವಿದ್ಯಾರ್ಥಿಗಳ ಬಳಿ ತೆರಳಿ ಸಮಸ್ಯೆ ಕೇಳಿದ್ದಾರೆ. ಬಳಿಕ ತಾವು ವಿದ್ಯಾರ್ಥಿಗಳ ಪರವಾಗಿರುವುದಾಗಿ ಹೇಳಿದ ಮುಖ್ಯಮಂತ್ರಿಗಳು, ಇಂದು ಸಂಜೆ 4 ಗಂಟೆಗೆ ವಿದ್ಯಾರ್ಥಿ ಮುಖಂಡರು ಕಚೇರಿಗೆ ಬಂದು ತಮ್ಮನ್ನು ಕಾಣುವಂತೆ ಸೂಚಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...