alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಧ್ಯಮ ಪ್ರತಿನಿಧಿಗಳ ಮುಂದೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು…?

ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿರುವ ಮಧ್ಯೆ ಇಂದು ಶೃಂಗೇರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಚಿಕ್ಕಮಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದಾರೆ.

ಬಿಜೆಪಿಯವರು ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ಕಳೆದ ರಾತ್ರಿ ಸಭೆ ನಡೆಸಿರುವ ಕುರಿತು ಮಾಹಿತಿ ತಮಗೆ ದೊರೆತಿದೆ ಎಂದು ಹೇಳಿದ್ದಾರೆ.

ಈ ಸಭೆಯಲ್ಲಿ ನೀವುಗಳು ಏನೇನು ಮಾತನಾಡಿದ್ದೀರಾ ಎಂಬುದು ನನಗೆ ಗೊತ್ತಿದೆ ಎಂದು ಹೇಳಿದ ಕುಮಾರಸ್ವಾಮಿಯವರು, ಸ್ವತಃ ನಾನೇ ನಮ್ಮ ಒಬ್ಬ ಶಾಸಕರನ್ನು ಬಿಜೆಪಿ ನಾಯಕರು ದುಡ್ಡು ಕೊಟ್ಟರೆ ತೆಗೆದುಕೊಳ್ಳಿ ಎಂದು ಹೇಳಿ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...