alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯನವರ ಪರ ನಿಂತರಾ ರಾಹುಲ್…?

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಕುಮಾರಸ್ವಾಮಿಯವರು ಅಧಿಕಾರ ವಹಿಸಿಕೊಂಡಿದ್ದು, ಉಭಯ ಪಕ್ಷಗಳಲ್ಲಿ ಸಮನ್ವಯ ಸಾಧಿಸುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ.

ಆದರೆ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ, ಮತ್ತವರ ಬೆಂಬಲಿಗರಿಂದಲೇ ಸಮ್ಮಿಶ್ರ ಸರ್ಕಾರಕ್ಕೆ ಮುಜುಗರ ಉಂಟಾಗುತ್ತಿರುವ ಕಾರಣ ಇಂದು ದೆಹಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ವೇಳೆ ಈ ಕುರಿತು ಸಮಾಲೋಚನೆ ನಡೆಸಿದ್ದರೆನ್ನಲಾಗಿದೆ.

ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಮಾತುಗಳನ್ನು ತಾಳ್ಮೆಯಿಂದ ಆಲಿಸಿದ ರಾಹುಲ್ ಗಾಂಧಿಯವರು, ಬಳಿಕ ಈ ವಿಚಾರವನ್ನು ಸಮನ್ವಯ ಸಮಿತಿಯಲ್ಲಿ ಬಗೆಹರಿಸಿಕೊಳ್ಳಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯನವರನ್ನು ಬೆಂಬಲಿಸಿದ್ದಾರಲ್ಲದೆ ಏಕಪಕ್ಷೀಯವಾಗಿ ಯಾವುದೇ ನಿರ್ಧಾರವನ್ನು ಕೈಗೊಳ್ಳದಂತೆ ಕಡಿವಾಣ ಹಾಕಿದ್ದಾರೆಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...