alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಬಳಿ ‘ಸಮನ್ವಯ’ದ ಸಂಕಷ್ಟಗಳನ್ನು ತೋಡಿಕೊಳ್ಳಲಿದ್ದರಾ ಸಿಎಂ…?

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬುಧವಾರದಂದು ನವದೆಹಲಿಗೆ ತೆರಳಿದ್ದು, ಇಂದು ಬೆಳಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆದ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲಿದ್ದಾರೆನ್ನಲಾಗಿದೆ.

ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಈಗಾಗಲೇ ನೂರು ದಿನಗಳು ಕಳೆದಿದ್ದು, ಉಭಯ ಪಕ್ಷಗಳ ನಡುವೆ ‘ಸಮನ್ವಯ’ ಸಾಧಿಸಲೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮಾಡಿಕೊಂಡಿರುವ ಸಮನ್ವಯ ಸಮಿತಿಯಿಂದಲೇ ಸರ್ಕಾರಕ್ಕೆ ಕಿರಿಕಿರಿ ಉಂಟಾಗುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಹುಲ್ ಗಾಂಧಿಯವರ ಬಳಿ ಹೇಳಿಕೊಳ್ಳುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಮತ್ತವರ ಬೆಂಬಲಿಗರು ನೀಡುತ್ತಿರುವ ಹೇಳಿಕೆಯಿಂದ ಸರ್ಕಾರಕ್ಕೆ ಉಂಟಾಗುತ್ತಿರುವ ಮುಜುಗರದ ಪರಿಸ್ಥಿತಿ ಕುರಿತು ಕುಮಾರಸ್ವಾಮಿಯವರು ರಾಹುಲ್ ಗಾಂಧಿಯವರ ಬಳಿ ಪ್ರಸ್ತಾಪಿಸಲಿದ್ದಾರೆ. ಜೊತೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರುಗಳನ್ನು ಸಮನ್ವಯ ಸಮಿತಿಗೆ ಸೇರ್ಪಡೆ ಮಾಡಿಕೊಳ್ಳುವ ವಿಚಾರದ ಕುರಿತೂ ಮಾತುಕತೆ ನಡೆಸಲಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...