alex Certify
ಕನ್ನಡ ದುನಿಯಾ       Mobile App
       

Kannada Duniya

ಬಜೆಟ್ ಕುರಿತ ಬಿಜೆಪಿ ನಾಯಕರ ಟೀಕೆಗೆ ಸಿಎಂ ಗರಂ

ಬಿಜೆಪಿ ನಾಯಕರು ಮೈತ್ರಿಕೂಟ ಸರ್ಕಾರದ ಬಜೆಟ್ ಕುರಿತು ಟೀಕೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಕಿಡಿ ಕಾರಿದ್ದಾರೆ.

ಬಜೆಟ್ ಮಂಡನೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಬಿಜೆಪಿ ನಾಯಕರು ಕಾಮಾಲೆ ಕಣ್ಣಿನವರು. ಬಜೆಟ್ ನಲ್ಲಿ ಇರುವ ಒಳ್ಳೆಯ ಅಂಶಗಳು ಅವರ ಕಣ್ಣಿಗೆ ಕಾಣುತ್ತಿಲ್ಲವೆಂದು ವ್ಯಂಗ್ಯವಾಡಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸೆಸ್ ಏರಿಕೆಯನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕಡಿಮೆ ಇದೆ ಎಂದು ಹೇಳಿದ್ದಾರೆ.

ಅಣ್ಣ-ತಮ್ಮನ ಬಜೆಟ್ ಎಂದು ಹಾಸನ ಹಾಗೂ ರಾಮನಗರ ಜಿಲ್ಲೆಗೆ ಬಜೆಟ್ ನಲ್ಲಿ ಆದ್ಯತೆ ನೀಡಿರುವ ಕುರಿತು ಬಿಜೆಪಿ ನಾಯಕರು ಮಾಡಿದ ಟೀಕೆಗೆ ಪ್ರತಿಕ್ರಿಸಿದ ಕುಮಾರಸ್ವಾಮಿಯವರು ಸಮಗ್ರ ಕರ್ನಾಟಕದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಬಜೆಟ್ ರೂಪಿಸಿದ್ದೇವೆ. ಬಿಜೆಪಿಯವರು ಸದನದಲ್ಲಿ ಬಂದು ಮಾತನಾಡಲಿ. ಆಗ ಅವರಿಗೆ ತಕ್ಕ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...