alex Certify
ಕನ್ನಡ ದುನಿಯಾ       Mobile App
       

Kannada Duniya

ಸಮನ್ವಯ ಸಮಿತಿ ಸಭೆಯಲ್ಲಿಂದು ಸಿದ್ದರಾಮಯ್ಯ-ಹೆಚ್.ಡಿ.ಕೆ. ಮುಖಾಮುಖಿ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸಮನ್ವಯ ಸಮಿತಿ ಸಭೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ನಡೆಯಲಿದ್ದು, ಸರ್ಕಾರದ ಆಯುಷ್ಯ ಕುರಿತು ಸಿದ್ದರಾಮಯ್ಯ ಹೇಳಿಕೆಯ ಬಳಿಕ ಅವರನ್ನು ಪರೋಕ್ಷವಾಗಿ ಟೀಕೆ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಸಭೆಯಲ್ಲಿ ಮುಖಾಮುಖಿಯಾಗಲಿದ್ದಾರೆ.

ಸಿದ್ದರಾಮಯ್ಯನವರು ಈಗಾಗಲೇ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದು, ಲೋಕಾಭಿರಾಮವಾಗಿ ಮಾತನಾಡಿದ ವಿಚಾರವನ್ನು ಕಿಡಿಗೇಡಿಗಳು ವಿಡಿಯೋ ಮಾಡಿ ಬಹಿರಂಗಪಡಿಸಿದ್ದಾರೆ. ಈ ಸರ್ಕಾರ ಐದು ವರ್ಷಗಳ ಕಾಲ ಸುಗಮವಾಗಿ ನಡೆದುಕೊಂಡು ಹೋಗಲಿದೆ ಎಂದು ತಿಳಿಸಿದ್ದಾರೆ.

ಇಂದಿನ ಸಭೆಯಲ್ಲಿ ಜುಲೈ 5ರಂದು ಮಂಡನೆಯಾಗಲಿರುವ ಬಜೆಟ್ ಕುರಿತು ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ತಿಳಿದು ಬಂದಿದ್ದು, ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ, ಕೆ.ಸಿ. ವೇಣುಗೋಪಾಲ್, ಜಿ. ಪರಮೇಶ್ವರ್ ಹಾಗೂ ಡ್ಯಾನಿಶ್ ಆಲಿ ಭಾಗವಹಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...