alex Certify
ಕನ್ನಡ ದುನಿಯಾ       Mobile App
       

Kannada Duniya

ಬಜೆಟ್ ಬಳಿಕ ‘ಹೆಬ್ಬೆಟ್ಟು ರಾಮಕ್ಕ’ ವೀಕ್ಷಿಸಿದ ಸಿದ್ದರಾಮಯ್ಯ

ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಬಜೆಟ್ ನಲ್ಲಿ ತಾವು ಈ ಹಿಂದೆ ನೀಡಿದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡಿದ್ದು, ಜೊತೆಗೆ ಈ ಹಿಂದಿನ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿನ ಜನಪ್ರಿಯ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗಲಿದ್ದಾರೆ

ಬಜೆಟ್ ಮಂಡನೆ ಕಲಾಪದಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರು ಬಜೆಟ್ ಕುರಿತು ತಮ್ಮ ತೃಪ್ತಿ ವ್ಯಕ್ತಪಡಿಸಿದ್ದು, ಬಳಿಕ ಕೆಲ ಶಾಸಕರೊಂದಿಗೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ‘ಹೆಬ್ಬೆಟ್ಟು ರಾಮಕ್ಕ’ ಚಲನಚಿತ್ರ ವೀಕ್ಷಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ ಈ ಚಿತ್ರ ವೀಕ್ಷಣೆಯ ವ್ಯವಸ್ಥೆ ಮಾಡಿದ್ದು, ಬಜೆಟ್ ಮಂಡನೆಯಾದ ನಂತರ ಸಿದ್ದರಾಮಯ್ಯನವರು ಚಿತ್ರ ವೀಕ್ಷಿಸಲು ತೆರಳಿದ್ದರು. ಸಿದ್ದರಾಮಯ್ಯನವರಿಗೆ ಕೆಲ ವಿಧಾನ ಪರಿಷತ್ ಸದಸ್ಯರು ಸಾಥ್ ನೀಡಿದ್ದು, ಚಿತ್ರ ವೀಕ್ಷಿಸಿದ ಬಳಿಕ ಸಿದ್ದರಾಮಯ್ಯ ಚಿತ್ರದ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...