alex Certify
ಕನ್ನಡ ದುನಿಯಾ       Mobile App
       

Kannada Duniya

ಮೂರು ದಿನಗಳಿಂದ ಹೋಟೆಲ್ ನಲ್ಲಿಯೇ ವಾಸ್ತವ್ಯ ಹೂಡಿರುವ ಸಿಎಂ…! ಕಾರಣವೇನು ಗೊತ್ತಾ?

ಇಂದು ಮೈತ್ರಿಕೂಟ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುವ ಸಲುವಾಗಿ ಕಳೆದ ಮೂರು ದಿನಗಳಿಂದ ಮನೆಗೆ ತೆರಳದೆ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿಯೇ ವಾಸ್ತವ್ಯ ಹೂಡಿದ್ದಾರೆಂದು ತಿಳಿದು ಬಂದಿದೆ.

ಜೆಪಿ ನಗರದ ತಮ್ಮ ನಿವಾಸಕ್ಕೆ ಸಾರ್ವಜನಿಕರು ಆಗಮಿಸುವ ಹಿನ್ನಲೆಯಲ್ಲಿ ಬಜೆಟ್ ಸಿದ್ಧತೆ ಕೈಗೊಳ್ಳಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಕುಮಾರಸ್ವಾಮಿಯವರು ಹೋಟೆಲಿನಲ್ಲಿ ತಂಗಿದ್ದು, ಸರ್ಕಾರದ ಹಿರಿಯ ಅಧಿಕಾರಿಗಳನ್ನು ಅಲ್ಲಿಗೇ ಕರೆಸಿಕೊಂಡು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆನ್ನಲಾಗಿದೆ.

ಮಹತ್ವದ ಸಂಗತಿಯೆಂದರೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರೂ ಸಹ ಬುಧವಾರ ಸಂಜೆ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ತೆರಳಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಬಜೆಟ್ ಕುರಿತು ಕೆಲ ಸಲಹೆಗಳನ್ನು ನೀಡಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...