alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮಯ್ಯ ಆಪ್ತ ಅಧಿಕಾರಿಗೆ ಕೊನೆಗೂ ಸಿಕ್ತು ಹುದ್ದೆ

ಜೆಡಿಎಸ್ ಕಾಂಗ್ರೆಸ್ ಮೈತ್ರಿ ಕೂಟದ ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿಯವರು ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಪ್ತರಾಗಿದ್ದ ಅಧಿಕಾರಿಗಳನ್ನು ಕಡೆಗಣಿಸಲಾಗಿತ್ತು.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರಿಗೆ ಆಪ್ತರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಎಲ್.ಕೆ. ಅತೀಕ್ ಅವರಿಗೆ ಯಾವುದೇ ಹುದ್ದೆ ತೋರಿಸಿರಲಿಲ್ಲ. ಇದು ಸಿದ್ದರಾಮಯ್ಯನವರ ಅಸಮಾಧಾನಕ್ಕೂ ಕಾರಣವಾಗಿತ್ತು. ಇದೀಗ ಎಲ್.ಕೆ. ಅತೀಕ್ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...