alex Certify
ಕನ್ನಡ ದುನಿಯಾ       Mobile App
       

Kannada Duniya

‘ದೋಸ್ತಿ ಸರ್ಕಾರ’ಕ್ಕೆ ನಿರ್ಣಾಯಕವಾಗಲಿದೆಯಾ ಇಂದಿನ ಸಮನ್ವಯ ಸಮಿತಿ ಸಭೆ…?

ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಜಯ ಸಾಧಿಸುವ ಮೂಲಕ ಬೀಗುತ್ತಿರುವ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯೇ ತಲೆನೋವಾಗಿ ಪರಿಣಮಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ನಡೆಯಲಿರುವ ಸಮನ್ವಯ ಸಮಿತಿ ಸಭೆ ಮಹತ್ವ ಪಡೆದುಕೊಂಡಿದೆ.

ಕೆಲ ಕಾಂಗ್ರೆಸ್ ಸಚಿವರು ಹಾಗೂ ಶಾಸಕರುಗಳೇ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಜೊತೆಗೆ ಹಾಸನ ಜಿಲ್ಲೆಯಲ್ಲಿ ಸಚಿವ ರೇವಣ್ಣ ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳನ್ನು ಕಡೆಗಣಿಸುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.

ತಮ್ಮೆಲ್ಲ ಅಸಮಾಧಾನವನ್ನು ಸಿದ್ದರಾಮಯ್ಯನವರ ಬಳಿ ವ್ಯಕ್ತಪಡಿಸಿದ್ದು, ಇದು ಇಂದಿನ ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಗುವ ನಿರೀಕ್ಷೆಯಿದೆ. ಜೊತೆಗೆ ಸಂಪುಟ ವಿಸ್ತರಣೆ ಕುರಿತಂತೆ ಹೆಚ್ಚುತ್ತಿರುವ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ಈ ಕುರಿತೂ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ಇಂದಿನ ಸಮನ್ವಯ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳುವ ಕೆಲ ತೀರ್ಮಾನಗಳು ದೋಸ್ತಿ ಸರ್ಕಾರಕ್ಕೆ ನಿರ್ಣಾಯಕವಾಗಿರಲಿದೆ ಎನ್ನಲಾಗುತ್ತಿದ್ದು, ಈ ನಿರ್ಣಯಗಳು ಸರ್ಕಾರದ ಮೇಲೆ ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...